ಬಿಡದಿ ಟೌನ್‌ಶಿಪ್ ಜಟಾಪಟಿ – ಭೈರಮಂಗಲದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದ್ದ ರೈತರ ಮೇಲೆ FIR – ಕಹಳೆ ನ್ಯೂಸ್

ರಾಮನಗರ: ಬಿಡದಿ ಟೌನ್‌ಶಿಪ್ ವಿರೋಧಿಸಿ ಭೈರಮಂಗಲ ಗ್ರಾಮದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದ್ದ ರೈತರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.
ಬಿಡದಿ ಪೊಲೀಸ್ ಠಾಣೆಯಲ್ಲಿ 15ಕ್ಕೂ ಹೆಚ್ಚು ಮಂದಿ ಮೇಲೆ ಎಫ್‌ಐಆರ್ ದಾಖಲಿಸಿದ್ದು, ಸುಮೋಟೊ ಕೇಸ್ ದಾಖಲಿಸಲಾಗಿದೆ. ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ, ಶಾಲಾ ಮಕ್ಕಳಿಗೆ, ಸರಕು ಸಾಗಾಣಿಕೆ ವಾಹನಗಳ ಸಂಚಾರಕ್ಕೆ ಅಡ್ಡಿ ಎಂದು ಕೇಸ್ ದಾಖಲಾಗಿದೆ.
ಪ್ರತಿಭಟನಾ ನಿರತ ರೈತರಾದ ಗಿರೀಶ್, ಚೇತನ್, ಚಂದ್ರಶೇಖರ್, ನಾಗೇಶ್, ಶಿವರುದ್ರಪ್ಪ, ವಿರೇಶ್, ಪುಟ್ಟಸ್ವಾಮಯ್ಯ, ಬೈರಪ್ಪ, ಕೃಷ್ಣಪ್ಪ, ನಾಗರಾಜು, ಜಯಮ್ಮ, ಜಯಲಕ್ಷ್ಮಿ, ಶ್ವೇತಾ, ಭಾಗ್ಯ, ನೇತ್ರಾ ವಿರುದ್ಧ ಪ್ರಕರಣ ದಾಖಲಾಗಿದೆ. ಪಿಎಸ್‌ಐ ದೇವರಾಜು ದೂರಿನನ್ವಯ ಎಫ್‌ಐಆರ್ ದಾಖಲಿಸಲಾಗಿದೆ.










