Monday, September 28, 2026
ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಲಂಗಾರು ಒಕ್ಕೂಟದ ಪದಗ್ರಹಣ ಕಾರ್ಯಕ್ರಮ- ಕಹಳೆ ನ್ಯೂಸ್

ವಿಟ್ಲ :. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ವಿಟ್ಲ ಇದರ ಅಳಿಕೆ ವಲಯದ ಅಲಂಗಾರು ಒಕ್ಕೂಟದ ಪದಗ್ರಹಣ ಕಾರ್ಯಕ್ರಮದ ಸೆಪ್ಟಂಬರ್ 27 ಭಾನುವಾರ ದ.ಕ ಜಿ.ಪಂ. ಹಿ. ಪ್ರಾ ಶಾಲೆ ಚಂದಳಿಕೆಯಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಅಲಂಗಾರುಒಕ್ಕೂಟ ಅಧ್ಯಕ್ಷೆ ಸುಜಾತ ವಹಿಸಿದ್ದರು.

ಜಾಹೀರಾತು

ಅಳಿಕೆ ವಲಯದ ಜನಜಾಗೃತಿ ಅಧ್ಯಕ್ಷರಾದ ಬಾಲಕೃಷ್ಣ ಕಾರಂತ್ ಕಾರ್ಯಕ್ರಮ ಉದ್ಘಾಟಿಸಿ, ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಕಾರ್ಯಕ್ರಮಗಳಿಂದಾಗಿ ಪ್ರತಿಮನೆ, ಪ್ರತಿಗ್ರಾಮ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾರದ ಮಕ್ಕಳಿಗೆ ವಿದ್ಯೆ ಜೊತೆಗೆ ಉತ್ತಮ ಸಂಸ್ಕಾರ ಕಲಿಸಬೇಕು ಎಂದರು.
ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲ್ಲೂಕು ಯೋಜನಾಧಿಕಾರಿ ಸುರೇಶಗೌಡ ಕ್ಷೇತ್ರದ ಪರಿಚಯ, ಯೋಜನೆ ಕಾರ್ಯಕ್ರಮ. ಬ್ಯಾಂಕಿನ ವ್ಯವಸ್ಥೆ ನೂತನ. ಒಕ್ಕೂಟದ ಪದಾಧಿಕಾರಿಗಳ ಜವಬ್ದಾರಿಯ ಬಗ್ಗೆ ತಿಳಿಸಿದರು.
ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪುನೀತ, ನಿವೃತ್ತ ಸೈನಿಕ ಅಶೋಕ ಕುಮಾರ, ಅಳಿಕೆ ವಲಯಧ್ಯಕ್ಷರಾದ ರಾಜೇಂದ್ರ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಿಕಟಪೂರ್ವ ಪದಾಧಿಕಾರಿಗಳು ನೂತನ ಪದಾಧಿಕಾರಿಗಳು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಸದಸ್ಯರು. ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಅಳಿಕೆ ವಲಯ ಮೇಲ್ವಿಚಾರಕಿ ಮೀನಾಕ್ಷಿ ಸ್ವಾಗತಿಸಿ, ವಿಶಾಲಕ್ಷೀ ವಂದಿಸಿದರು,ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು.