Monday, September 28, 2026
ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ.(ರಿ) ಬಿ ಸಿ ಟ್ರಸ್ಟ್ ಬಂಟ್ವಾಳ ತಾಲ್ಲೂಕು ಇದರ 2076 ನೇ ಮಧ್ಯವರ್ಜನಾ ಶಿಬಿರದ ತ್ರೈ ಮಾಸಿಕ ಸಭೆ ಹಾಗೂ ಗಾಂಧಿ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆ- ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ.(ರಿ) ಬಿ ಸಿ ಟ್ರಸ್ಟ್ ಬಂಟ್ವಾಳ ತಾಲ್ಲೂಕು ಇದರ 2076 ನೇ ಮಧ್ಯವರ್ಜನಾ ಶಿಬಿರದ ತ್ರೈ ಮಾಸಿಕ ಸಭೆ ಮತ್ತು ಅಕ್ಟೋಬರ್ 2 ನಡೆಯಲಿರುವ ಗಾಂಧಿ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ನಡೆಯಿತು.
ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ 1 ರ ನಿರ್ದೇಶಕ ದಿನೇಶ್ ಡಿ ಸಭೆಯನ್ನು ಉದ್ಘಾಟಿಸಿ ನವಜೀವನ ಸಮಿತಿ ಸದಸ್ಯರಿಗೆ ಮಾಹಿತಿ ಮಾರ್ಗದರ್ಶನ ನೀಡಿದರು. ತಾಲ್ಲೂಕು ಯೋಜನಾಧಿಕಾರಿ ಜಯಾನಂದ ಪಿ ಧರ್ಮಸ್ಥಳದ ಅಮೃತವರ್ಷಿಣಿ ಸಭಾ ಭವನದಲ್ಲಿ ಅಕ್ಟೋಬರ್ 2 ನಡೆಯುವ ಗಾಂಧಿ ಜಯಂತಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ನವಜೀವನ ಸಮಿತಿ ಸದಸ್ಯರಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ನವಜೀವನ ಸಮಿತಿ ಸದಸ್ಯರು, ಸೇವಾಪ್ರತಿನಿಧಿ, ನವಜೀವನ ಸಮಿತಿ ಪೋಷಕರು, ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬಿ ಸಿ ರೋಡ್ ವಲಯದ ಸೇವಾಪ್ರತಿನಿಧಿ ಆಶಾಲತಾ ವಂದಿಸಿದರು.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು