Recent Posts

Wednesday, September 30, 2026
ಸುದ್ದಿ

ಶಿಶಿಲದಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಮಹರ್ಷಿ ವಾಲ್ಮೀಕಿ ಆದಿವಾಸಿ ಶಾಲೆ ಉದ್ಘಾಟಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ-ಕಹಳೆ ನ್ಯೂಸ್

ಬೆಳ್ತಂಗಡಿ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ವತಿಯಿಂದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಶಿಶಿಲದಲ್ಲಿ ರೂ.4 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ವಾಲ್ಮೀಕಿ ಆಶ್ರಮ ಶಾಲೆಯನ್ನು ಸೆ.29 ರಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.

ಜಾಹೀರಾತು

ಸಭಾ ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಹತ್ಯಡ್ಕ ಪ್ಯಾಕ್ಸ್ ಅಧ್ಯಕ್ಷ ರಾಘವೇಂದ್ರ ನಾಯಕ್, ಧರ್ಮಸ್ಥಳ ಗ್ರಾ. ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಮಲೆಕುಡಿಯರ ಸಂಘದ ಜಿಲ್ಲಾಧ್ಯಕ್ಷ ಹರೀಶ್ ಎಳನೀರು, ಶಿಶಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂದೀಪ್, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಉಮೇಶ್, ವೈಕುಂಠಪುರ ದುರ್ಗಾಪರಮೇಶ್ವರಿ ಯುವಕ ಮಂಡಲ ಅಧ್ಯಕ್ಷ ಹರೀಶ್ ಕೊಳನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಪ.ಪಂ ಮಾಜಿ ಸದಸ್ಯ ಶರತ್, ಮುಂಡಾಜೆ ಪ್ಯಾಕ್ಸ್ ಅಧ್ಯಕ್ಷ ಪ್ರಕಾಶ್ ನಾರಾಯಣ್ ಚಾರ್ಮಾಡಿ, ತಾ.ಪಂ ಮಾಜಿ ಸದಸ್ಯ ಕೊರಗಪ್ಪ ಗೌಡ, ಪ್ರಮುಖರಾದ ಸೀತಾರಾಮ ಬೆಳಾಲು, ಬಾಲಕೃಷ್ಣ ನೈಮಿಷ,ಯಶವಂತ್, ರಾಜೇಶ್ ಮಲೆಕುಡಿಯ, ಬಾಲಕೃಷ್ಣ ಮುಗೇರಡ್ಕ, ಚಂದ್ರಕಾಂತ್ ನಿಡ್ಡಾಜೆ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕರುಣಾಕರ ಶಿಶಿಲ ಸ್ವಾಗತಿಸಿ, ರಮೇಶ್ ಬೈರಕಟ್ಟ ನಿರೂಪಿಸಿದರು.