Recent Posts

Wednesday, September 30, 2026
ಸುದ್ದಿ

ಪುತ್ತೂರಿನ ಪರ್ಲಡ್ಕ SDP ರೆಮೇಡಿಸ್ & ರಿಸರ್ಚ್ ಸೆಂಟರ್ ನ ಡಾ.ಹರಿಕೃಷ್ಣ ಪಾಣಾಜೆಯವರಿಗೆ ಕನ್ನಡಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ಪ್ರಾಯೋಜಕತ್ವದ ‘ಆಯುರ್ ಭೂಷಣ-2026’ ಪ್ರಶಸ್ತಿ ಪ್ರಧಾನ-ಕಹಳೆ ನ್ಯೂಸ್

ಬೆಂಗಳೂರು: ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಆಯುರ್ವೇದ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಸಾಧಕ ಪುತ್ತೂರಿನ ಪರ್ಲಡ್ಕ SDP ರೆಮೇಡಿಸ್ & ರಿಸರ್ಚ್ ಸೆಂಟರ್ ನ ಡಾ.ಹರಿಕೃಷ್ಣ ಪಾಣಾಜೆಯವರಿಗೆ ‘ಆಯುರ್ ಭೂಷಣ-2026’ ಪ್ರಶಸ್ತಿ ಪ್ರದಾನ ಸಮಾರಂಭ ಸೆ. 26ರಂದು ಬೆಂಗಳೂರಿನಲ್ಲಿ ನಡೆಯಿತು.
ಕನ್ನಡಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ಪ್ರಾಯೋಜಕತ್ವದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಆಯುರ್ವೇದ ಕ್ಷೇತ್ರದ ಸಾಧಕರನ್ನು ಗೌರವಿಸಲಾಯಿತು
ಶ್ರೀ ರಾಮಕೃಷ್ಣ ಸೇವಾಶ್ರಮ, ಪಾವಗಡದ ಅಧ್ಯಕ್ಷರಾದ ಶ್ರೀಮತ್ ಸ್ವಾಮಿ ಜಪಾನಂದಜಿ ಮಹಾರಾಜ್, ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಡಾ. ಉಮಾಶ್ರೀ ಹಾಗೂ ವಿಧಾನ ಪರಿಷತ್ ಸದಸ್ಯ ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಟಿ.ಎ. ಶರವಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕನ್ನಡಪ್ರಭ–ಏಷ್ಯಾನೆಟ್ ಸುವರ್ಣ ನ್ಯೂಸ್ ಸಮೂಹ ಸಂಪಾದಕೀಯ ನಿರ್ದೇಶಕ ರವಿ ಹೆಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು
ನಟ ಹಾಗೂ ನಿರ್ದೇಶಕ ಸುಚೇಂದ್ರ ಪ್ರಸಾದ್, ಖ್ಯಾತ ಆಯುರ್ವೇದ ವೈದ್ಯ ಡಾ. ಗಿರಿಧರ ಕಜೆ ಹಾಗೂ ದುಬೈನ ಪರ್ವ ಗ್ರೂಪ್ ಸಂಸ್ಥಾಪಕ ನೀಲೇಶ್ ಎಚ್.ಪಿ. ಉಪಸ್ಥಿತರಿದ್ದರು.
ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಹಿನ್ನೆಲೆಯಲ್ಲಿ ಆಯುರ್ವೇದ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು.

ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು