Recent Posts

Wednesday, September 30, 2026
ಸುದ್ದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ : ವಿವೇಕಾನಂದ  ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ-ಕಹಳೆ ನ್ಯೂಸ್

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಸುದಾನ ಪದವಿಪೂರ್ವ ಕಾಲೇಜು, ಇದರ ಸಹಯೋಗದಲ್ಲಿ ನಡೆಯಿತು.ಈ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನಗಳಿಸಿದೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಪ್ರೀತಂ.ಸಿ.ಆರ್, ಚೇತನ್.ಎಮ್.ಎಮ್,ನಿರೀಕ್ಷಿತ್, ಪ್ರೀತಂ, ಜಯಂತ್.ಕೆ.ಎಸ್ ದ್ವಿತೀಯ ಪಿಯುಸಿಯ ಕಾರ್ತಿಕ್ ಕೆಮ್ಮಿಂಜೆ, ಸಾತ್ವಿಕ್, ಅಮೃತ್.ಬಿ.ಕೆ, ವರ್ಷಿತ್.ಬಿ.ಎಮ್ ,ಭವಿಶ್ ಡಿ ಗೌಡ ,ಪೃಥ್ವಿರಾಜ್.ಕೆ.ಆರ್ ,ಆತ್ಮಿಕ್ .ಎ.ಎಸ್ ಭಾಗವಹಿಸಿರುತ್ತಾರೆ. ದ್ವಿತೀಯ ವಿಜ್ಞಾನ ವಿಭಾಗದ ಅಮೃತ್ ಬಿ. ಕೆ
ಅವರು ಪಂದ್ಯಾಟದ ಬೆಸ್ಟ್ ಅಟ್ಯಾಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು