ಪ್ರದೋಷ್ ಮಾಫಿ ಸಾಕ್ಷಿ ಸಂಬಂಧಿಸಿ ʼಹೈʼ ಆದೇಶ ಪ್ರಶ್ನಿಸಿ ದರ್ಶನ್, ಪತ್ನಿ ವಿಜಯಲಕ್ಷ್ಮಿಯಿಂದ ಸುಪ್ರೀಂಗೆ 3 ಮೇಲ್ಮನವಿ ಸಲ್ಲಿಕೆ – ಕಹಳೆ ನ್ಯೂಸ್

ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣ ಸಂಬಂಧ ಪ್ರದೋಷ್ ಕೋರ್ಟ್‌ನಲ್ಲಿ ಸಾಕ್ಷ್ಯ ಹೇಳಿಕೆ ಪ್ರಕ್ರಿಯೆ ನಡೆಯುತ್ತಿದೆ. ಇನ್ನೊಂದು ಕಡೆ ದರ್ಶನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ಅವರು ಸುಪ್ರೀಂಕೋರ್ಟ್‌ಗೆ ಒಟ್ಟು 3 ಮೇಲ್ಮನವಿ ಅರ್ಜಿಗಳನ್ನು ಸಲ್ಲಿಸಿರುವುದು ತಿಳಿದು ಬಂದಿದೆ.
ಹೈಕೋರ್ಟ್ ಇತ್ತೀಚೆಗೆ ನೀಡಿರುವ ವಿವಿಧ ಆದೇಶಗಳನ್ನು ಪ್ರಶ್ನಿಸಿ ದರ್ಶನ್, ವಿಜಯಲಕ್ಷ್ಮಿ ಸೇರಿ ಮೂರು ಮೇಲ್ಮನವಿಗಳನ್ನು ಸಲ್ಲಿಸಲಾಗಿದೆ. ಇದೇ ವಾರ ಈ ಅರ್ಜಿಗಳ ವಿಚಾರಣೆ ನಡೆಯುವ ಸಾಧ್ಯತೆಯಿದೆ.
ಪ್ರದೋಷ್ ಮಾಫಿ ಸಾಕ್ಷಿ ನಿಯಾಮವಳಿಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ಇತ್ತೀಚೆಗೆ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ದರ್ಶನ್ ʼಸುಪ್ರೀಂʼಗೆ ಎರಡು ಮೇಲ್ಮನವಿಯನ್ನು ಸಲ್ಲಿಸಿದ್ದಾರೆ.
ʼಮಾಫಿ ಸಾಕ್ಷಿ ಆದೇಶ ನೀಡುವ ಮುನ್ನ ಸಹ ಆರೋಪಿ ವಾದ ಆಲಿಸುವ ಅಗತ್ಯವಿಲ್ಲʼ ಎನ್ನುವ ತೀರ್ಪನ್ನು ಪ್ರಶ್ನಿಸಲಾಗಿದೆ. ಮಾಫಿ ಸಾಕ್ಷಿ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ದರ್ಶನ್ ಪ್ರಶ್ನೆ ಮಾಡಿದ್ದಾರೆ.
ಮಾಫಿ ಸಾಕ್ಷಿ ಆದೇಶವನ್ನು ಎತ್ತಿಹಿಡಿದಿದ್ದ ಹೈಕೋರ್ಟ್‌ನ ಸೆ.23ರ ತೀರ್ಪನ್ನು ಪ್ರಶ್ನಿಸಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಸುಪ್ರೀಂ ಕೋರ್ಟ್‌ಗೆ ಮತ್ತೊಂದು ಮೇಲ್ಮನವಿ ಸಲ್ಲಿಸಿದ್ದಾರೆ.
ಸುಪ್ರೀಂ ಕೋರ್ಟ್ ಈ ವಾರದಲ್ಲೇ ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.










