Thursday, October 1, 2026
ಸುದ್ದಿ

ಕಲ್ಲಡ್ಕ ಫ್ಲೈಓವರ್‌ ಮೇಲೆ ದನ ಸಾಗಾಟದ ಲಾರಿ ಪತ್ತೆ : ಪೊಲೀಸರಿಗೆ ಮಾಹಿತಿ ನೀಡಿದ ಬಜರಂಗದಳ ಸಂಘಟನೆಯ ಕಾರ್ಯಕರ್ತರು-ಕಹಳೆ ನ್ಯೂಸ್

KAHALE NEWS

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಎನ್ನಲಾದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು, ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಬುಧವಾರ ಮುಂಜಾನೆ ನಡೆದಿದೆ.

ಜಾಹೀರಾತು

ಮಾಣಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯನ್ನು ಕಲ್ಲಡ್ಕ ಫ್ಲೈಓವರ್ ಮೇಲೆ ತಡೆದು ಪರಿಶೀಲಿಸಿದಾಗ, ಲಾರಿಯಲ್ಲಿ ಆರುಕ್ಕೂ ಅಧಿಕ ದನಗಳು ಪತ್ತೆಯಾಗಿವೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮಾಹಿತಿ ಪಡೆದ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ದನಗಳನ್ನು ರಕ್ಷಿಸಿ, ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ದನಗಳು ಎಲ್ಲಿಂದ ತರಲಾಗಿತ್ತು ಹಾಗೂ ಎಲ್ಲಿಗೆ ಕೊಂಡೊಯ್ಯಲಾಗುತ್ತಿತ್ತು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ. ಈ ಕುರಿತು ಬಂಟ್ವಾಳ ನಗರ ಠಾಣೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.