Thursday, October 1, 2026
ಕ್ರೈಮ್ಸುದ್ದಿ

ಮಂಗಳೂರು: ಆರೋಪಿ ಸಹಿತ ಮಾದಕ ವಸ್ತು ವಶಕ್ಕೆ – ಕಹಳೆ ನ್ಯೂಸ್

ಮಂಗಳೂರು: ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಮುಂದಾಗಿದ್ದ ಆರೋಪಿಯನ್ನು ಪೊಲೀಸರು ಬಂದಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನ ಕಾವೂರು ಠಾಣಾ ಪೊಲೀಸರು ಮರಕಡ ಗ್ರಾಮದ ಬೊಂದೇಲ್‌ನಿಂದ ಮೂಡುಶೆಡ್ಡೆ ಕಡೆಗೆ ಹೋಗುವ ಡಾಮಾರು ರಸ್ತೆಯ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಉಳ್ಳಾಲದ ಕೆ ಸಿ ರೋಡ್ ನಿವಾಸಿ ಮೊಹಮ್ಮದ್ ಇರ್ಫಾನ್ ಎ.ಕೆ, (26) ಎಂಬಾತನನ್ನು ಬಂಧಿಸಿದ್ದಾರೆ.


ಈತನ ಬಳಿ ಇದ್ದ ಸುಮಾರು 16 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತುವನ್ನು ಕಾನೂನು ಬದ್ಧವಾಗಿ ವಶಪಡಿಸಿಕೊಳ್ಳಲಾಗಿದ್ದು, ಇದರ ಅಂದಾಜು ಮೌಲ್ಯ 1,60,000 ರೂ. ಎಂದು ತಿಳಿದು ಬಂದಿದೆ. ಈ ಬಗ್ಗೆ ಕಾವೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.