Thursday, October 1, 2026
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಬೆಂಗಳೂರು:ಎಲ್‌ಪಿಜಿ ಸಿಲಿಂಡರ್ ಗಳ ಸ್ಫೋಟ, ತಪ್ಪಿದ ಭಾರೀ ಅವಘಡ – ಕಹಳೆ ನ್ಯೂಸ್

ಬೆಂಗಳೂರು: ನಗರದ ಕಗ್ಗದಾಸಪುರದ ಖಾಲಿ ನಿವೇಶನವೊಂದರಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಶೆಡ್‌ನಲ್ಲಿ ಬುಧವಾರ(ಸೆ.30) ಏಕಕಾಲದಲ್ಲಿ ಮೂರು ಎಲ್‌ಪಿಜಿ ಸಿಲಿಂಡರ್ ಗಳು ಸ್ಫೋಟಗೊಂಡಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ 6ನೇ ಕ್ರಾಸ್‌, ಕಗ್ಗದಾಸಪುರದಲ್ಲಿರುವ ನಿವೇಶನದಲ್ಲಿ ಸಿಲಿಂಡರ್ ಗಳು ಸ್ಫೋಟಗೊಂಡಿದೆ ಎಂದು ಪೊಲೀಸರು ಹೇಳಿದ್ದಾರೆ.

ಜಾಹೀರಾತು

ಸ್ಫೋಟದ ತೀವ್ರತೆಗೆ ಶೆಡ್‌ಗೆ ಹಾನಿಯಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಯಾವುದೇ ಪ್ರಾಣಹಾನಿ ಅಥವಾ ಗಾಯವಾಗಿರುವುದು ಕಂಡುಬಂದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಪೋಟದ ದೃಶ್ಯಗಳ ವಿಡಿಯೋ ಕೂಡ ಬಹಿರಂಗಗೊಂಡಿದ್ದು, ಒಂದಾದರ ಮೇಲೊಂದು ಸಿಲಿಂಡರ್ ಗಳು ಸ್ಪೋಟಗೊಂಡು ಬೆಂಕಿಯ ಜ್ವಾಲೆ ಕಾಣಿಸಿಕೊಂಡಿದೆ.

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಘಟಕವೇ?

ಇದು ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಘಟಕವಾಗಿತ್ತೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅಧಿಕಾರಿ, “ಘಟನೆ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬಂದಿ, ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.