Friday, October 2, 2026
ಸುದ್ದಿ

ಪರಪ್ಪನ ಅಗ್ರಹಾರದಲ್ಲಿ ಮತ್ತೆ ಮೊಬೈಲ್, ಸಿಮ್‌ ಪತ್ತೆ; ಆರೋಪಿಗಳ ವಿರುದ್ಧ FIR – ಕಹಳೆ ನ್ಯೂಸ್

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮತ್ತೆ ನಿಷೇಧಿತ ವಸ್ತುಗಳು ಪತ್ತೆಯಾಗಿವೆ. ಜೈಲಿನೊಳಗೆ ಒಂದು ಮೊಬೈಲ್ ಫೋನ್ ಹಾಗೂ ಮೂರು ಸಿಮ್‌ಕಾರ್ಡ್‌ಗಳು ಪತ್ತೆಯಾಗಿದ್ದು, ಈ ಸಂಬಂಧ ಆರೋಪಿತರ ವಿರುದ್ಧ ಪ್ರಕರಣ ದಾಖಲಾಗಿದೆ.
ಜೈಲಿನೊಳಗೆ ನಿಷೇಧಿತ ವಸ್ತುಗಳು ಹೇಗೆ ಪ್ರವೇಶಿಸಿದವು ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಮೊಬೈಲ್ ಹಾಗೂ ಸಿಮ್‌ಗಳನ್ನು ಜೈಲಿನೊಳಗೆ ಬಿಟ್ಟ ಅಧಿಕಾರಿಗಳ ವಿರುದ್ಧವೂ ಕ್ರಮಕ್ಕೆ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಾಹೀರಾತು

ಇನ್ನು ಜೈಲಿನೊಳಗೆ ಮೊಬೈಲ್ ಬಳಸುತ್ತಿದ್ದ ಆರೋಪಿತರ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ. ಈ ಸಂಬಂಧ ಜೈಲು ಅಧಿಕಾರಿ ಕೊಟ್ರೇಶ್ ನೀಡಿದ ದೂರಿನ ಆಧಾರದ ಮೇಲೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು