ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ- ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು: “ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಯಾವಾಗಲೂ ಅಳವಡಿಸಿಕೊಳ್ಳಬೇಕು. ಸತ್ಯ ಮತ್ತು ಅಹಿಂಸೆಯನ್ನು ಇಡೀ ವಿಶ್ವಕ್ಕೆ ತೋರಿಸಿಕೊಟ್ಟವರು ಮಹಾತ್ಮಗಾಂಧೀಜಿ. ಅವರ ಆದರ್ಶಗಳನ್ನು ಅನುದಿನವು ಪಾಲಿಸಬೇಕೆಂದು” ಪಟ್ಟೆ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ಶ್ರೀಮಾನ್ ವಿಘ್ನೇಶ್ ಹಿರಣ್ಯ ರವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ದಿನಾಚರಣೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಸುಮನ ಮಾತಾಜಿ, ಪ್ರಾಥಮಿಕ ಶಾಲಾ ಮುಖ್ಯ ಗುರುಗಳಾದ ಶ್ರೀಮಾನ್ ರಾಜಗೋಪಾಲ್ ಎನ್, ಅಂಗ್ಲ ಮಾಧ್ಯಮದ ಮುಖ್ಯಗುರುಗಳಾದ ಶ್ರೀಮತಿ ಪುಷ್ಪಾವತಿ ಮಾತಾಜಿ ಉಪಸ್ಥಿತರಿದ್ದರು. ಹತ್ತನೇ ತರಗತಿಯ ಯಶ್ವಿತಾ ಗಾಂಧಿ ಜಯಂತಿಯ ಬಗ್ಗೆ ಮಾತುಗಳನ್ನಾಡಿದರು. ಶ್ರೀ ಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ಪುಷ್ಪಾವತಿ ಮಾತಾಜಿ ಸ್ವಾಗತಿಸಿ, ಪ್ರೌಢಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಸುಮನ ಮಾತಾಜಿ ಅವರು ವಂದನಾರ್ಪಣೆಗೈ ದರು. ಪ್ರೌಢಶಾಲಾ ಶಿಕ್ಷಕಿಯಾದ ಶ್ರೀಮತಿ ಶೈಲಾಶ್ರೀ ಮಾತಾಜಿ ಅವರು ಕಾರ್ಯಕ್ರಮ ನಿರೂಪಿಸಿದರು. ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.










