ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಗ್ರಾಮದ ಪೆರುವಾಯಿ ಎಂಬಲ್ಲಿ ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಆರೋಪದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ
ಅಕ್ಟೋಬರ್ 2ರಂದು ಮಧ್ಯಾಹ್ನ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಆಧರಿಸಿ ಪೊಲೀಸ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಹಣ ಪಣಕ್ಕಿಟ್ಟು ಕೋಳಿ ಅಂಕ ನಡೆಸುತ್ತಿರುವುದು ದೃಢಪಟ್ಟಿದೆ.
ಈ ವೇಳೆ ಕೃಷಪ್ಪ (59), ಲಕ್ಷ್ಮಣ ನಾಯ್ಕ್ (38), ಶೋಬಿತ್ ರಾಜ್ (29) ಹಾಗೂ ಯುವರಾಜ್ (46) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ಥಳದಲ್ಲಿದ್ದ ಕೋಳಿಗಳು, ಕೋಳಿ ಅಂಕಕ್ಕೆ ಬಳಸಲಾಗಿದ್ದ ₹3,050 ನಗದು ಹಾಗೂ ಕತ್ತಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 203/2026ರಂತೆ ಪ್ರಕರಣ ದಾಖಲಾಗಿದ್ದು, ಕೆಪಿ ಕಾಯ್ದೆ, ಪ್ರಾಣಿ ಹಿಂಸೆ ತಡೆ ಕಾಯ್ದೆ ಹಾಗೂ ಬಿಎನ್‌ಎಸ್‌ನ ಸಂಬಂಧಿತ ಕಲಂಗಳಡಿ ತನಿಖೆ ಮುಂದುವರಿದಿದೆ.











