Recent Posts

Sunday, October 4, 2026
ಸುದ್ದಿ

ರಿಲೇಯಲ್ಲಿ ಚಿನ್ನ ಗೆದ್ದರೂ ತವರು ರಾಜ್ಯದಲ್ಲಿ ಬೆಂಬಲದ ಕೊರತೆ: ಪೂವಮ್ಮಾ ಬೇಸರ -ಕಹಳೆ ನ್ಯೂಸ್

ಏಷ್ಯನ್ ಗೇಮ್ಸ್‌ನಲ್ಲಿ ದೇಶದ ಪರ ಚಿನ್ನದ ಪದಕ ಗೆದ್ದು ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿರುವ ಅಥ್ಲೀಟ್ ಎಂ.ಆರ್. ಪೂವಮ್ಮಾ, ರಾಜ್ಯ ಸರ್ಕಾರದಿಂದ ನಿರೀಕ್ಷಿತ ಮಟ್ಟದ ಮನ್ನಣೆ ಹಾಗೂ ಬೆಂಬಲ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕರ್ನಾಟಕದ ಕ್ರೀಡಾಪಟುಗಳಿಗೆ ಮತ್ತು ಇತರ ರಾಜ್ಯಗಳ ಕ್ರೀಡಾಪಟುಗಳಿಗೆ ನೀಡಲಾಗುವ ಗೌರವದಲ್ಲಿ ವ್ಯತ್ಯಾಸವಿದೆ ಎಂಬ ಬೇಸರವನ್ನೂ ಅವರು ಹೊರಹಾಕಿದ್ದಾರೆ

.ಪ್ರೋತ್ಸಾಹ ಸಿಗುತ್ತಿಲ್ಲ

ಮಂಗಳೂರಿನ ಸಿಟಿ ಸೆಂಟರ್ ಮಾಲ್‌ನಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಪೂವಮ್ಮಾ, ಏಷ್ಯನ್ ಗೇಮ್ಸ್‌ನಲ್ಲಿ ಮತ್ತೊಮ್ಮೆ ಪದಕ ಗೆದ್ದಿರುವುದು ಹೆಮ್ಮೆಯ ವಿಚಾರವಾದರೂ, ತವರು ರಾಜ್ಯದಿಂದ ಸಿಗಬೇಕಾದ ಪ್ರೋತ್ಸಾಹ ಸಮರ್ಪಕವಾಗಿ ದೊರೆಯದಿರುವುದು ಬೇಸರ ತಂದಿದೆ ಎಂದು ಹೇಳಿದ್ದಾರೆ. ಕ್ರೀಡಾಪಟುಗಳ ಸಾಧನೆಯನ್ನು ಗುರುತಿಸುವ ಸಂದರ್ಭದಲ್ಲಿ ರಾಜ್ಯದ ಪ್ರತಿಭೆಗಳಿಗೆ ಸಮಾನ ಅವಕಾಶ ಮತ್ತು ಗೌರವ ನೀಡಬೇಕೆಂಬುದು ಅವರ ಅಭಿಪ್ರಾಯವಾಗಿದೆ.

ಪೂವಮ್ಮಾ ಅವರ ಮಾತಿಗೆ ಸ್ಪಂದಿಸಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಕರ್ನಾಟಕದ ಕ್ರೀಡಾಪಟುಗಳಿಗೆ ಸೂಕ್ತ ಮನ್ನಣೆ ದೊರೆಯಬೇಕು ಎಂದು ಹೇಳಿದ್ದಾರೆ. ಪೂವಮ್ಮಾ ಅವರ ಸಾಧನೆಯ ಬಗ್ಗೆ ರಾಜ್ಯ ಹೆಮ್ಮೆಪಡುತ್ತದೆ. ಆದರೆ ಸ್ಥಳೀಯ ಪ್ರತಿಭೆಗಳಿಗೆ ಅಗತ್ಯ ಬೆಂಬಲ ಸಿಗದಿರುವುದು ಬೇಸರದ ಸಂಗತಿ ಎಂದ ಅವರು, ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತಂದು ಅಗತ್ಯ ಕ್ರಮಕ್ಕೆ ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.