Recent Posts

Sunday, October 4, 2026
ಸುದ್ದಿ

ಮೈಸೂರು ದಸರಾ: ಪ್ರಮೋದಾದೇವಿ ಒಡೆಯರ್‌ಗೆ ಆಹ್ವಾನ – ಕಹಳೆ ನ್ಯೂಸ್

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ಶುಕ್ರವಾರ ಸರ್ಕಾರದಿಂದ ಅಧಿಕೃತವಾಗಿ ಆಹ್ವಾನ ನೀಡಲಾಯಿತು.

ಜಾಹೀರಾತು

ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಅರಮನೆಯಲ್ಲಿರುವ ನಿವಾಸದಲ್ಲಿ ಪ್ರಮೋದಾದೇವಿ ಅವರನ್ನು ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲತಾಂಬೂಲ ಹಾಗೂ ಆಮಂತ್ರಣ ‍ಪತ್ರಿಕೆ ನೀಡಿ ಆಹ್ವಾನಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ನಂತರ ಮಾತನಾಡಿದ ಸಚಿವರು, ‘ಪ್ರತಿ ಬಾರಿಯಂತೆ ಈ ಬಾರಿಯೂ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ. ರಾಜಮನೆತನದಿಂದ ದಸರಾ ಆಚರಣೆಗೆ ಸಂಪೂರ್ಣ ಸಹಕಾರ ಕೊಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ಅಂಬಾರಿ ಕಟ್ಟುವ ಸಮಯದಲ್ಲಿ ಕಳೆದ ಬಾರಿ ಹೆಚ್ಚಿನ ಜನಸಂದಣಿಯಿಂದ ವಿಳಂಬ ಆಗಿದ್ದನ್ನು ನೆನಪಿಸಿದ ಅವರು, ಈ ಬಾರಿ ಅಂಬಾರಿ ಕಟ್ಟುವ ಜಾಗದಲ್ಲಿ ಕಡಿಮೆ ಜನರಿಗೆ ಅವಕಾಶ ನೀಡಿ ಸುಸೂತ್ರವಾಗಿ ಪ್ರಕ್ರಿಯೆ ನಡೆಸಬೇಕು ಎಂದು ಸಲಹೆ ನೀಡಿದ್ದಾರೆ’ ಎಂದು ತಿಳಿಸಿದರು.

ಶಾಸಕ ಟಿ.ಎಸ್. ಶ್ರೀವತ್ಸ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯೂಬ್‌ಖಾನ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಎಸ್. ಯುಕೇಶ್‌ಕುಮಾರ್, ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್, ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯಾ ಆರ್., ಮಹಾನಗರಪಾಲಿಕೆ ಎಸ್‌ಇ ಕೆ.ಜೆ. ಸಿಂಧು ಇದ್ದರು.