ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಅ.11ರಿಂದ ಅ.21ರವರೆಗೆ ವಿಜೃಂಭಣೆಯ ಪುತ್ತೂರು ದಸರಾ -2026 – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರವರ ಶುಭಾಶೀರ್ವಾದಗಳೊಂದಿಗೆ, ವರ್ಷಂಪ್ರತಿ ಆಚರಿಸಲ್ಪಡುವ ನವರಾತ್ರಿ ಪೂಜೆ ಹಾಗೂ ಶ್ರೀ ಶಾರದೋತ್ಸವ, ಚಂಡಿಕಾಹೋಮ ಮತ್ತು ವಿಜೃಂಭಣೆಯ ಭವ್ಯ ಶೋಭಾಯಾತ್ರೆಯು ಅ.11ರಿಂದ ಅ.21ರವರೆಗೆ ನಡೆಯಲಿದೆ.
ಅ.11ರಂದು ನವರಾತ್ರಿ ಉತ್ಸವ ಪ್ರಾರಂಭವಾಗಲಿದ್ದು, ಸಂಜೆ ಗಣ್ಯರ ಉಪಸ್ಥಿತಿಯಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ ನಡೆಯಲಿದೆ.ಕಾರ್ಯಕ್ರಮವನ್ನು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಈಶ್ವರ ಭಟ್ ಪಂಜಿಗುಡ್ಡೆ, ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಲಿದ್ದಾರೆ. ಇನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶ್ರೀಮತಿ ಶಕುಂತಳಾ ಟಿ. ಶೆಟ್ಟಿ, ಶ್ರೀ ದಂಡನಾಯಕ ಉಳ್ಳಾಳ್ತಿ ದೈವಸ್ಥಾನ ಬಲ್ನಾಡು ಇದರ ಮಾಜಿ ಆಡಳಿತ ಮೋಕ್ತೇಸರರಾದ ಚನಿಲ ತಿಮ್ಮಪ್ಪ ಶೆಟ್ಟಿ, ಪುತ್ತೂರು ನಗರಸಭಾದ ಮಾಜಿ ಅಧ್ಯಕ್ಷರಾದ ಜಗದೀಶ ಶೆಟ್ಟಿ ನೆಲ್ಲಿಕಟ್ಟೆ, ಪುತ್ತೂರು ಬಿಜೆಪಿ ವಕ್ತಾರ ರಾಜೇಶ್ ಬನ್ನೂರು ಹಾಗೂ ಮತ್ತಿತ್ತರ ಗಣ್ಯರ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಅ.17ರಂದು ಬೆಳಿಗ್ಗೆ 9.30ರ ನಂತರ ಶ್ರೀ ಶಾರದಾ ಮಾತೆ ಪ್ರತಿಷ್ಠೆ ನಡೆಯಲಿದೆ. ಕಾರ್ಯಕ್ರಮವನ್ನು ಮಹಾವೀರ ಮೆಡಿಕಲ್ ಸೆಂಟರ್ ಪುತ್ತೂರು ಇಲ್ಲಿನ ವೈದ್ಯರಾದ ಡಾ.ಅಶಾ ಪುತ್ತೂರಾಯ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಲಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರ ಮಾಜಿ ಶಾಸಕರಾದ ಸಂಜೀವ ಮಠಂದೂರು, ತಮನ್ನಿ ಸಿಲ್ಕ್ ನ ಮಾಲಕಿ ಶ್ರೀಮತಿ ಮಾಲಾಶ್ರೀ, ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸಂಸ್ಥೆಯ ಮಾಜಿ ಆಡಳಿತ ಮೊಕ್ತೇಸರಾದ ರವೀಂದ್ರ ಶೆಟ್ಟಿ ನುಳಿಯಾಲು, ಬಿಜೆಪಿ ದ.ಕ. ಜಿಲ್ಲೆಯ ಮಾಜಿ ಉಪಾಧ್ಯಕ್ಷರಾದ ಬೂಡಿಯಾರ್ ರಾಧಾಕೃಷ್ಣ ರೈ, ಉದ್ಯವಿಗಳಾದ ಶಿವರಾಮ ಅಳ್ವ, ಭಾವಿನ್ ಶೇಟ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಂಜೆ ಮುಳಿಯ ಜ್ಯುವೆಲ್ಲರ್ಸ್ ನ ನಿರ್ದೇಶಕರಾದ ಶ್ರೀಮತಿ ಕೃಷ್ಣವೇಣಿ ಮುಳಿಯ ಅವರು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಬಿ.ಜೆ.ಪಿ. ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ಶ್ರೀ ದೇವತಾ ಭಜನಾ ಮಂದಿರ ತಿಂಗಳಾಡಿ ಇದರ ಅಧ್ಯಕ್ಷರಾದ ಮಿತ್ರಂಪಾಡಿ ಜಯರಾಮ ರೈ, ಪುತ್ತೂರು ನಗರಸಭೆಯ ಮಾಜಿ ಅಧ್ಯಕ್ಷರಾದ ಜೀವಂಧರ್ ಜೈನ್, ಹಾಗೂ ಮತ್ತಿತ್ತರ ಗಣ್ಯರು ಭಾಗವಹಿಸಲಿದ್ದಾರೆ. ಬಳಿಕ ಸುಸ್ವರ ಮೆಲೋಡಿಸ್ ಉಪ್ಪಿನಂಗಡಿ ಇವರಿಂದ ಶ್ರೀ ರಂಗಯ್ಯ ಬಳ್ಳಾಲ್ ಕೆದಂಬಾಡಿ ಬೀಡು ಮತ್ತು ತಂಡದವರಿAದ ಭಕ್ತಿ ಭಾವ – ಗಾನ ಸಂಭ್ರಮ ನಡೆಯಲಿದೆ.

ಅ.18ರಂದು ಬೆಳಿಗ್ಗೆ ಗಂಟೆ 8-00 ರಿಂದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ಸಾಮೂಹಿಕ ಚಂಡಿಕಾ ಹೋಮ ನಡೆಯಲಿದೆ.
ಮಧ್ಯಾಹ್ನ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆದು, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ. ಬೆಂಗಳೂರು – ಮೈಸೂರು ವಿಭಾಗ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಗೊಟ್ಟು ದೀಪ ಪ್ರಜ್ವಲನೆ ನಡೆಸಲಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಪುತ್ತೂರು ಇದರ ಅಧ್ಯಕ್ಷ ಕೃಷ್ಣಪ್ರಸಾದ್ ಅಳ್ವ, ಬಿ.ಜೆ.ಪಿ. ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರು, ಕಾವು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ನಿ. ಇದರ ಅಧ್ಯಕ್ಷ ನನ್ಯ ಅಚ್ಚುತ್ತ ಮೂಡೆತ್ತಾಯ, ಹಾಗೂ ಮತ್ತಿತ್ತರ ಗಣ್ಯರು ಭಾಗವಹಿಸಲಿದ್ದಾರೆ. ಬಳಿಕ ವಿಶ್ವಕಲಾನಿಕೇತನ ಇನ್ಸಿಟ್ಯೂಟ್ ಆಫ್ ಆಟ್ಸ್ & ಕಲ್ಟರ್ (ರಿ.) ಪುತ್ತೂರು ಇದರ ಶಿಷ್ಯ ವೃಂದದವರಿAದ ವಿದೂಷಿ ನಯನಾ ವಿ. ರೈ ಮತ್ತು ವಿದೂಷಿ ಸ್ವಸ್ತಿಕಾ ಆರ್. ಶೆಟ್ಟಿ ಕುದ್ಯಾಡಿ ಅವರ ನಿರ್ದೇಶನದಲ್ಲಿ ಭರತನಾಟ್ಯ ಕಾರ್ಯಕ್ರಮ ನೃತ್ಯಧಾರೆ ನಡೆಯಲಿದೆ.
ಅ.19ರಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ. ಕಾರ್ಯಕ್ರಮವನ್ನು ಎಸ್.ಎಲ್.ವಿ ಬುಕ್‌ಹೌಸ್, ಮೈಸೂರು ಇದರ ಮಾಲಕರಾದ ದಿವಾಕರ್ ದಾಸ್ ನೇರ್ಲಾಜೆ, ಅವರು ಉದ್ಘಾಟಿಸಲಿದ್ದಾರೆ. ಬಿಜೆಪಿ ಮುಖಂಡರಾದ ಮುರಳಿಕೃಷ್ಣ ಹಸಂತಡ್ಕ, ಉಷಾ ಮೆಡಿಕಲ್ ದರ್ಬೆ ಪುತ್ತೂರು ಇದರ ಮಾಲಕರಾದ ಗಣೇಶ್ ಭಟ್, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರ, ಪುತ್ತೂರು ಇದರ ಅಧ್ಯಕ್ಷರಾದ ಸುಜೀಂದ್ರ ಪ್ರಭು, ದ.ಕ. ಜಿಲ್ಲಾ ಬಿ.ಜೆ.ಪಿ. ಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ವಿದ್ಯಾ ಆರ್. ಗೌರಿ, ಉದ್ಯಮಿಗಳಾದ ಉಮೇಶ್ ನಾಡಾಜೆ, ವಿಶ್ವ ಹಿಂದೂ ಪರಿಷತ್, ಪುತ್ತೂರು ಜಿಲ್ಲಾಧ್ಯಕ್ಷರಾದ ಡಾ. ಕೃಷ್ಣಪ್ರಸನ್ನ ಭಾಗವಹಿಸಲಿದ್ದಾರೆ. ಬಳಿಕ ಡಾ. ಕಿರಣ್ ಕುಮಾರ್ ಗಾನಸಿರಿ ಇವರಿಂದ ಗಾನಸಿರಿ ಕಲಾಕೇಂದ್ರದ ಉದಯೋನ್ಮುಖ ಹಾಡು ಹಕ್ಕಿಗಳಿಂದ ಗಾನಸಿರಿ ಸ್ವರ ಸಂಗಮ ಕಾರ್ಯಕ್ರಮ ನಡೆಯಲಿದೆ.

ಅ.20 ರಂದು ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ), ಪುತ್ತೂರು ಇದರ ಸ್ಥಾಪಕರಾದ ಅರುಣ್ ಕುಮಾರ್ ಪುತ್ತಿಲ, ಅವರು ದೀಪ ಪ್ರಜ್ವಲಿಸಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಮಾಜಿ ಶಾಸಕರಾದ ಶ್ರೀಮತಿ ಮಲ್ಲಿಕಾ ಪ್ರಸಾದ್, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘ, ಪುತ್ತೂರು ಇದರ ಅಧ್ಯಕ್ಷರಾದ ಚಿದಾನಂದ ಬೈಲಾಡಿ, ಹೊಟೇಲ್ ಗಣೇಶ್ ಪ್ರಸಾದ್ ನ ಗೋಪಾಲಕೃಷ್ಣ ಹೇರಳೆ, ಮಾಜಿ ನಗರಸಭಾ ಸದಸ್ಯರಾದ ಶ್ರೀಮತಿ ಇಂದಿರಾ ಪುರುಷೋತ್ತಮ ಆಚಾರ್ಯ, ಪ್ರೀಯದರ್ಶಿನಿ ಆಂಗ್ಲಮಾಧ್ಯಮ ಶಾಲೆ ಬೆಟ್ಟಂಪಾಡಿ ಇದರ ಅಧ್ಯಕ್ಷರಾದ ರಂಗನಾಥ ರೈ ಗುತ್ತು, ಹಾಗೂ ಬಿ.ಜೆ.ಪಿ. ರಾಜ್ಯ ಹಿಂದುಳಿದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಆರ್.ಸಿ. ನಾರಾಯಣ ಭಾಗವಹಿಸಲಿದ್ದಾರೆ. ಬಳಿಕ ಪಾಂಚಜನ್ಯ ಯಕ್ಷಕಲಾ ವೃಂದ ಪುತ್ತೂರು ಇವರಿಂದ “ಅಭೀಷ್ಠ ಸಿದ್ಧಿ” ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ.
ಅ.21ರಂದು ಬೆಳಿಗ್ಗೆ 9-00ರಿಂದ ಅಕ್ಷರಾಭ್ಯಾಸ ನಡೆಯಲಿದೆ. ಸಂಜೆ ಬೊಳುವಾರು ವೃತ್ತದಿಂದ ಚೆಂಡೆಮೇಳ, ವಾದ್ಯಘೋಷ, ಕುಣಿತ ಭಜನೆ ಹಾಗೂ ಕೇರಳ, ತಮಿಳುನಾಡು ಮತ್ತು ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರಸಿದ್ಧ ಸಾಂಸ್ಕೃತಿಕ ಕಲಾತಂಡಗಳ ವಿಶೇಷ ಆಕರ್ಷಣೆಗಳೊಂದಿಗೆ ಶ್ರೀ ಶಾರದಾ ದೇವಿಯ ಭವ್ಯ ಶೋಭಾಯಾತ್ರೆ ನಡೆಯಲಿದೆ.










