ಏಷ್ಯನ್ ಗೇಮ್ಸ್; ಚಿನ್ನ ಗೆದ್ದ ಕರ್ನಾಟಕದ ಓಟಗಾರ್ತಿ ಎಂ ಆರ್ ಪೂವಮ್ಮ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಏಷ್ಯನ್ ಗೇಮ್ಸ್‌ನ ಮಹಿಳೆಯರ 4×400 ಮೀಟರ್ ರಿಲೇ ಓಟದಲ್ಲಿ ಚಿನ್ನ ಹಾಗೂ ಮಿಶ್ರ 4×400 ಮೀಟರ್ ರಿಲೇ ಓಟದಲ್ಲಿ ಬೆಳ್ಳಿ ಪದಕ ಗೆದ್ದ ಕರ್ನಾಟಕದ ಖ್ಯಾತ ಓಟಗಾರ್ತಿ ಎಂ.ಆರ್. ಪೂವಮ್ಮ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದರು.
ಈ ಗಮನಾರ್ಹ ಸಾಧನೆಯನ್ನು ಶ್ಲಾಘಿಸಿದ ಅವರು, “ಕರ್ನಾಟಕದ ಕ್ರೀಡಾಪಟುಗಳ ಪ್ರತಿಭೆಗೆ ಬೆಂಬಲ ನೀಡಲು ಹಾಗೂ ಅಥ್ಲೀಟ್‌ಗಳು ಇನ್ನಷ್ಟು ಉನ್ನತ ಎತ್ತರಕ್ಕೆ ಬೆಳೆಯಲು ಶಕ್ತಿ ತುಂಬಲು ಸರ್ಕಾರ ಬದ್ಧವಾಗಿದೆ” ಎಂದು ಪುನರುಚ್ಚರಿಸಿದರು.










