ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಇನ್ನೋವಾ ಅಪಘಾತ; ಪ್ರಾಣಪಾಯದಿಂದ ಶಾಸಕಿ ಪಾರು-ಕಹಳೆ ನ್ಯೂಸ್

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಅಪಘಾತಕ್ಕೀಡಾದ ಘಟನೆ ಕರಿಕ್ಕಳ–ನಿಂತಿಕಲ್ ಮಧ್ಯೆ ಮುಚ್ಚಿಲ ಎಂಬಲ್ಲಿ ನಡೆದಿದೆ.
ಎದುರಿನಿಂದ ಸಾಗುತ್ತಿದ್ದ ಕಾರೊಂದು ಏಕಾಏಕಿ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ, ಶಾಸಕಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಮುಂಭಾಗದ ಕಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇನ್ನೋವಾ ಕಾರಿನ ಮುಂಭಾಗ ಜಖಂಗೊಂಡಿದೆ.
ಅಪಘಾತದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಕಾರಿನ ಚಾಲಕ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಬಳಿಕ ಶಾಸಕಿ ಬೇರೊಂದು ಕಾರಿನಲ್ಲಿ ಮನೆಗೆ ತೆರಳಿದ್ದಾರೆ.










