Thursday, October 8, 2026
ಸುದ್ದಿ

ವಿದ್ಯಾಭಾರತಿ ವಲಯ ಮಟ್ಟದ ವಿಜ್ಞಾನ ಪ್ರಬಂಧ ಪ್ರಸ್ತುತಿಯಲ್ಲಿ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮಂದಿರಾ ಕಜೆ ಪ್ರಥಮ ಸ್ಥಾನ !-ಕಹಳೆ ನ್ಯೂಸ್

ಪುತ್ತೂರು: ಆಂಧ್ರಪ್ರದೇಶದ ವಿಜಯವಾಡ ಸಮೀಪದ ನುಟ್ಟಕ್ಕಿಯ ವಿಜ್ಞಾನ ವಿಹಾರ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ವಲಯ ಮಟ್ಟದ ವಿಜ್ಞಾನ ಪ್ರಬಂಧ ಪ್ರಸ್ತುತಿ ಸ್ಪರ್ಧೆಯಲ್ಲಿ ಪುತ್ತೂರಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯ, ನೆಲ್ಲಿಕಟ್ಟೆಯ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮಂದಿರಾ ಕಜೆ ಪ್ರಥಮ ಸ್ಥಾನ ಗಳಿಸಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕರ್ನಾಟಕ, ತೆಲಂಗಾಣ ಹಾಗೂ ಆಂಧ್ರಪ್ರದೇಶ ರಾಜ್ಯಗಳ ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಮಂದಿರಾ ಅವರು ತಮ್ಮ ವಿಷಯ ಮಂಡನೆ ಹಾಗೂ ಆತ್ಮ ವಿಶ್ವಾಸಭರಿತ ಪ್ರಸ್ತುತಿಯ ಮೂಲಕ 5 ತೀರ್ಪುಗಾರರ ಮೆಚ್ಚುಗೆ ಪಡೆದು ಪ್ರಥಮ ಬಹುಮಾನವನ್ನು ತಮ್ಮದಾಗಿಸಿಕೊಂಡರು.

 

ಮಂದಿರಾ ಅವರು ಪುತ್ತೂರಿನ ವಕೀಲರಾದ ಮಹೇಶ್ ಕಜೆ  ಹಾಗೂ ದೀಪಿಕಾ ಭಟ್ ಕಜೆ ದಂಪತಿಯ ಪುತ್ರಿಯಾಗಿದ್ದು, ಪ್ರಸ್ತುತ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. ಈ ಸಾಧನೆಯೊಂದಿಗೆ ಅವರು ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ವಿಜ್ಞಾನ ಪ್ರಬಂಧ ಪ್ರಸ್ತುತಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.