Thursday, October 8, 2026
ಸುದ್ದಿ

ರಾಜ್ಯದಲ್ಲಿ ಇನ್ಮುಂದೆ ಹಾಫ್‌ ಹೆಲ್ಮೆಟ್ ಬ್ಯಾನ್; ದುಬಾರಿ ದಂಡದ ಎಚ್ಚರಿಕೆ! -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆ ಮಹತ್ವದ ಆದೇಶವೊಂದನ್ನ ಹೊರಡಿಸಿದ್ದು, ಹಾಫ್ ಹೆಲ್ಮೆಟ್‌ಗಳ ಬಳಕೆ ನಿಷೇಧ ಮಾಡಲಾಗಿದೆ. ಬಿಐಎಸ್ ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡಗಳನ್ನು ಪಾಲಿಸುವ ಹೆಲ್ಮೆಟ್‌ಗಳನ್ನು ಮಾತ್ರ ಬಳಸಬೇಕು. ಒಂದು ವೇಳೆ ಬಳಸಿ, ನಿಯಮ ಉಲ್ಲಂಘಿಸಿದ್ರೆ ದುಬಾರಿ ದಂಡ ವಿಧಿಸುವುದಾಗಿ ಇಲಾಖೆ ಎಚ್ಚರಿಕೆ ನೀಡಿದೆ.

ಜಾಹೀರಾತು

ಹೌದು.. ಹಾಫ್ ಹೆಲ್ಮೆಟ್‌ಗಳು ದ್ವಿಚಕ್ರ ವಾಹನ ಸವಾರರ ತಲೆಗೆ ಸಂಪೂರ್ಣ ರಕ್ಷಣೆ ಇಲ್ಲದಿರುವುದರಿಂದ, ಕೇವಲ ದಂಡದಿಂದ ತಪ್ಪಿಸಿಕೊಳ್ಳಲು ಧರಿಸುವ ಇಂತಹ ಅಸುರಕ್ಷಿತ ಹೆಲ್ಮೆಟ್‌ಗಳಿಗೆ ಬ್ರೇಕ್ ಹಾಕುವ ದೃಷ್ಟಿಯಿಂದ ಸಾರಿಗೆ ಇಲಾಖೆ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ನಿಯಮವು ಕೇವಲ ದ್ವಿಚಕ್ರ ಚಾಲನೆ ಮಾಡುವವರಿಗೆ ಮಾತ್ರವಲ್ಲ, ಅವರ ಹಿಂದೆ ಕುಳಿತುಕೊಳ್ಳುವ ಸಹಸವಾರರಿಗೂ ಕಡ್ಡಾಯವಾಗಿ ಅನ್ವಹಿಸುತ್ತದೆ.

ಇದೇ ವೇಳೆ ರಸ್ತೆ ಸುರಕ್ಷತಾ ಮಾನದಂಡಗಳಿಗೆ ಅನುಗುಣವಾಗಿಲ್ಲದ ಹಾಫ್ ಹೆಲ್ಮೆಟ್‌ಗಳ ಉತ್ಪಾದನೆಯನ್ನೇ ನಿಷೇಧಿಸುವುದು, ಇಂತಹ ಹೆಲ್ಮೆಟ್‌ಗಳನ್ನು ತಯಾರಿಸುವ ಉತ್ಪಾದಕರು ಹಾಗೂ ಮಾರಾಟಗಾರರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.