Monday, October 12, 2026
ಸುದ್ದಿ

ಎಸ್‌ಐಆರ್‌ ಫಾರಂ-7 ಸಲ್ಲಿಕೆ ಪ್ರಕರಣ: ಇಬ್ಬರು ಬಿಎಲ್‌ಎಗಳ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ – ಹಿರಿಯ ವಕೀಲ ಡಾ. ಅರುಣ್ ಶ್ಯಾಂ ಪುತ್ತೂರು ವಾದ.!- ಕಹಳೆ ನ್ಯೂಸ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದು ಹಾಕುವ ಉದ್ದೇಶದಿಂದ ತಪ್ಪು ಮಾಹಿತಿ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ಫಾರಂ-7 ಅರ್ಜಿಗಳನ್ನು ಸಲ್ಲಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಜಾಹೀರಾತು

ಎಫ್‌ಐಆರ್ ರದ್ದು ಕೋರಿ ಬೆಂಗಳೂರಿನ ಮಲ್ಲೇಶ್ವರದ ವಸಂತಲಕ್ಷ್ಮೀ ಹಾಗೂ ದೀಪಕ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ – ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಡಾ। ಆರುಣ್ ಶ್ಯಾಮ್ ಪುತ್ತೂರು ಅವರು ವಾದ ಮಂಡಿಸಿ, ಅರ್ಜಿದಾರರು ಬೂತ್ ಮಟ್ಟದ ಏಜೆಂಟರಾಗಿ (ಬಿಎಲ್‌ಎ) ಮತದಾರರ ಪಟ್ಟಿಯಿಂದ ಅನರ್ಹರ ಹೆಸರುಗಳನ್ನು ತೆಗೆದು ಹಾಕುವಂತೆ ಕೋರಿ ಫಾರಂ-7 ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಆ ಅರ್ಜಿಗಳನ್ನು ಪರಿಶೀಲಿಸಿ ತೀರ್ಮಾನಿಸುವ ಅಧಿಕಾರ ಚುನಾವಣಾ ಅಧಿಕಾರಿಗಳಿಗೆ ಮಾತ್ರವೇ ಇದೆ ಎಂದರು. ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಅನೂಪ್ ಕುಮಾರ್, ಒಬ್ಬರು ಗರಿಷ್ಠ 50 ಅರ್ಜಿಗಳನ್ನು ಸಲ್ಲಿಸಬಹುದಾದರೂ ಅರ್ಜಿದಾರರು 778 ಫಾರಂ-7 ಅರ್ಜಿಗಳನ್ನು ಸಲ್ಲಿಸಿದ್ದಾರೆ. ಮತದಾರರ ಹೆಸರುಗಳನ್ನು ದುರುದ್ದೇಶಪೂರ್ವಕವಾಗಿ ಪಟ್ಟಿಯಿಂದ ತೆಗೆದು ಹಾಕಲು ಯತ್ನಿಸಿದ್ದಾರೆ ಎಂದು ಆಕ್ಷೇಪಿಸಿದರು. ಆಗ ನ್ಯಾಯಪೀಠ, 50ಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸಿದರೆ ಅದು ಯಾವ ಕಾಯ್ದೆಯಡಿ ಅಪರಾಧವಾಗುತ್ತದೆ? ಫಾರಂ-7 ಸಲ್ಲಿಕೆಯಾದ ಬಳಿಕ ಚುನಾವಣಾ ಅಧಿಕಾರಿಗಳು ಅದರ ಸತ್ಯಾಸತ್ಯತೆ ಕುರಿತು ವಿಚಾರಣೆ ನಡೆಸುವುದಿಲ್ಲವೇ? ತಪ್ಪು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದರೆ ಅದನ್ನು ಅಧಿಕಾರಿಗಳೇ ಪರಿಶೀಲಿಸಿ ತೀರ್ಮಾನಿಸಬಹುದಲ್ಲವೇ? ಪಟ್ಟಿಯಿಂದ ಹೆಸರು ತೆಗೆದು ಹಾಕುವ ಮುನ್ನ ಸಂಬಂಧಪಟ್ಟ ಮತದಾರರಿಗೆ ನೋಟಿಸ್‌ ನೀಡಲಾಗುವುದಿಲ್ಲವೇ? ಎಂದು ಸರ್ಕಾರದ ಪರ ವಕೀಲರನ್ನು ಮೌಖಿಕವಾಗಿ ಪ್ರಶ್ನಿಸಿದ ನ್ಯಾಯಪೀಠ, ಇದು ಮೇಲ್ನೋಟಕ್ಕೆ ಆತುರದಿಂದ ದಾಖಲಿಸಿದ ದೂರಿನಂತೆ ಕಾಣುತ್ತಿದೆ ಎಂದು ಅಭಿಪ್ರಾಯಪಟ್ಟು, ಅರ್ಜಿದಾರರ ವಿರುದ್ದದ ಎಫ್‌ಐಆರ್‌ಗೆ ಮಧ್ಯಂತರ ತಡೆ ನೀಡಿ ಅರ್ಜಿ ವಿಚಾರಣೆ ಮುಂದೂಡಿತು.