Tuesday, October 13, 2026
ಸುದ್ದಿ

ಪ್ರಜ್ವಲ್ ರೇವಣ್ಣ ಬೆಳಗಾವಿ ಜೈಲಿಗೆ ಶಿಫ್ಟ್ ಇಲ್ಲ: ತುಮಕೂರಿನವರೆಗೂ ಕರೆದೊಯ್ದು ವಾಪಸ್ ಕರೆತಂದ ಪೊಲೀಸರು – ಕಹಳೆ ನ್ಯೂಸ್

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಗಳ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸುತ್ತಿದ್ದ ಪೊಲೀಸರು, ದಿಢೀರ್ ವಾಪಸ್ ಬೆಂಗಳೂರಿಗೆ ಕರೆತಂದಿದ್ದಾರೆ.
ಶನಿವಾರ ಸಂಜೆ ಸಿಎಆರ್ ಎಸ್ಕಾರ್ಟ್ ಪೊಲೀಸರು ಬಿಗಿ ಭದ್ರತೆಯೊಂದಿಗೆ ಪ್ರಜ್ವಲ್ ರೇವಣ್ಣರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರ ಮಾಡುತ್ತಿದ್ದರು. ವಾಹನ ತುಮಕೂರು ತಲುಪುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಪ್ರಜ್ವಲ್ ರೇವಣ್ಣರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ವಾಪಾಸ್ ಕರೆತರುವಂತೆ ಸೂಚಿಸಿದ್ದಾರೆ.

ಜಾಹೀರಾತು

ಮೇಲಧಿಕಾರಿಗಳ ಸೂಚನೆಯ ಮೇರೆಗೆ ಸಿಎಆರ್ ಸಿಬ್ಬಂದಿ ಪ್ರಜ್ವಲ್ ರೇವಣ್ಣರನ್ನು ರಾತ್ರಿಯೇ ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕರೆತಂದಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಎರಡು ಪ್ರಮುಖ ಪ್ರಕರಣಗಳ ವಿಚಾರಣೆ ಪ್ರಸ್ತುತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಹೀಗಾಗಿ ಕೆಲ ಪ್ರಮುಖ ಹಂತಗಳಲ್ಲಿ ಆರೋಪಿ/ಅಪರಾಧಿ ಖುದ್ದು ಕೋರ್ಟ್ಗೆ ಹಾಜರಾಗಬೇಕಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಒಂದು ವೇಳೆ ಪ್ರಜ್ವಲ್ ರೇವಣ್ಣರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರ ಮಾಡಿದರೆ ಪ್ರತಿ ಬಾರಿಯ ವಿಚಾರಣೆಗೂ ಅಲ್ಲಿಂದ ಬೆಂಗಳೂರಿಗೆ ಕರೆತರಬೇಕಾಗುತ್ತದೆ. ಇದು ಭದ್ರತೆ ಮತ್ತು ತಾಂತ್ರಿಕ ದೃಷ್ಟಿಯಿಂದ ಕಷ್ಟವಾಗಲಿದೆ ಎಂಬ ಕಾರಣಕ್ಕೆ ಪ್ರಜ್ವಲ್ ರೇವಣ್ಣರನ್ನು ಬೆಂಗಳೂರಿನ ಜೈಲಿನಲ್ಲೇ ಉಳಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.