Tuesday, October 13, 2026
ಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಪ್ರೇರಣಾ 2026ನ ಸಮಾರೋಪ ಸಮಾರಂಭ

ಪುತ್ತೂರು: ಅಧ್ಯಾಪಕ ವೃತ್ತಿ ಕೇವಲ ಒಂದು ವೃತ್ತಿಯಾಗದೆ, ಅದು ನಮ್ಮ ಪ್ರವೃತ್ತಿಯಾಗಬೇಕು. ಆಗ ಮಾತ್ರ ಆ ಕ್ಷೇತ್ರದಲ್ಲಿ ನಾವು ಬೆಳೆಯಲು ಸಾಧ್ಯ. ಶಿಕ್ಷಣ ಎನ್ನುವುದು ಪ್ರತಿಯೊಬ್ಬ ವ್ಯಕ್ತಿಯ ಆಂತರಿಕ ಶಕ್ತಿಯನ್ನು ಹೊರಗಿಡುವ ಒಂದು ಕೌಶಲ್ಯವಾಗಿದೆ. ಶಿಕ್ಷಣದ ಮೂಲಕ ಸಮಾಜವನ್ನು ಬದಲಾಯಿಸಲು ಸಾಧ್ಯ. ಇದರ ಮೂಲಕ ಭಾರತೀಯ ಸಮಾಜ ಶ್ರೇಷ್ಠವಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಸಹಕಾರ್ಯವಾಹ ಪ್ರಕಾಶ್ ಪಿ. ಎಸ್ ಹೇಳಿದರು.

ಜಾಹೀರಾತು

ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇದರ ಮಾತೃ ಸಂಸ್ಥೆಯಾದ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ಇದರ ನೇತೃತ್ವದಲ್ಲಿ ನಡೆದ ಭವಿಷ್ ಮತ್ತು ಯಶಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ‘ಪ್ರೇರಣಾ’ ೨೦೨೬ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯ ನಾರಾಯಣ ಕೆ ಎಂ ಮಾತನಾಡಿ, ಶಿಕ್ಷಕ ವೃತ್ತಿ ಎಂಬುದು ತುಂಬಾ ಪಾವಿತ್ರ‍್ಯದ ವೃತ್ತಿಯಾಗಿದೆ. ಸಮಾಜದಲ್ಲಿ ಡಾಕ್ಟರ್, ಇಂಜಿನಿಯರ್‌ಗಳು ವೃತ್ತಿಯಲ್ಲಿ ಸಾಧನೆ ಗೈದವರೆಲ್ಲರ ಬದುಕನ್ನು ರೂಪಿಸಲು ಶಿಕ್ಷಕಪಾತ್ರ ಮಹತ್ತರ ಎಂದು ನುಡಿದರು.
ವೇದಿಕೆಯಲ್ಲಿ ಭವಿಷ್ ಘಟಕದ ಮಾರ್ಗದರ್ಶಕ ಗಣಪತಿ ಹೆಗಡೆ, ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ.ಎನ್ ಹಾಗೂ ಪ್ರಾಂಶುಪಾಲ ಶ್ರೀಕೃಷ್ಣ ಗಣರಾಜ ಭಟ್. ಎಸ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಭವಿಷ್ ಘಟಕದ ಸಂಯೋಜಕಿ ಲಕ್ಷ್ಮೀ ಎಸ್ ಭಟ್ ಸ್ವಾಗತಿಸಿ, ಭವಿಷ್ ಘಟಕದ ಸಂಯೋಜಕ ಡಾ.ಪ್ರಮೋದ್ ಎಂ. ಜಿ ವಂದಿಸಿ, ಶಿಬಿರಾರ್ಥಿ ಶಿವಾನಿ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು