ವಿವೇಕಾನಂದ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಾಜಿ ಕಾಲೇಜಿನ ಉಪನ್ಯಾಸಕ ಪ್ರಮೋದ್ ಕುಮಾರ್ ಪಿ.ಎಂ, ಡಾಕ್ಡರೇಟ್ ಪದವಿ – ಕಹಳೆ ನ್ಯೂಸ್

ತಿಪ್ಪಟೂರಿನ ಕಲ್ಪತರು ಇಸ್ಟಿಟ್ಯೂಟ್ ಆಪ್ ಟೆಕ್ನಾಲಾಜಿ ಕಾಲೇಜಿನ ಆರ್ಟಿಫಿಶಿಯಲ್ ಇಂಟಲಿಜೆನ್ಸಿ ಆಂಡ್ ಮೆಷಿನ್ ಲರ್ನಿಂಗ್ ವಿಭಾಗದ ಮುಖ್ಯಸ್ಥ ಡಾ. ರವಿಪ್ರಕಾಶ್ ಎಂ.ಎಲ್ ಇವರ ಮಾರ್ಗದರ್ಶನದಲ್ಲಿ ವಿಶ್ವೇಶ್ವರ ತಾಂತ್ರಿಕ ವಿಶ್ವವಿದ್ಯಾಲಯ ವಿಟಿಯು ಗೆ ಸಲ್ಲಿಸಿದ “ARECA PLANT DISEASE IDENTIFICATION AND CLASSIFICATION USING DEEP LEARNING TECHNIQUES” (ಅರೆಕಾ ಪ್ಲಾಂಟ್ ಡಿಸೀಸ್ ಐಡೆಂಟಿಫಿಕೇಶನ್ ಆಂಡ್ ಕ್ಲಾಸಿಫಿಕೇಶನ್ ಯುಸಿಂಗ್ ಡೀಪ್ ಲರ್ನಿಂಗ್ ಟೆಕ್ನಿಕ್ಸ್) ಎಂಬ ಮಹಾ ಪ್ರಬಂಧಕ್ಕೆ ಪಿ.ಹೆಚ್.ಡಿ ಪದವಿ ಲಭಿಸಿದೆ.
ಇವರು ನಿವೃತ್ತ ಮುಖೋಪಾಧ್ಯಯ ಮೋನಪ್ಪ ಗೌಡ.ಪಿ ಮತ್ತು ದೇವಕಿ.ಪಿ ದಂಪತಿಗಳ ಪುತ್ರನಾಗಿರುವ ಡಾ.ಪ್ರಮೋದ್ ಕುಮಾರ್ ಪಿ.ಎಂ ಇವರು ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಲ್ತಾಡಿ ಹಾಗೂ ಪ್ರೌಢ ಮತ್ತು ಪದವಿ ಶಿಕ್ಷಣವನ್ನು ಶ್ರೀ ರಾಮಕುಂಜೇಶ್ವರ ಪಿ.ಯು ಕಾಲೇಜು, ರಾಮಕುಂಜ ಇಲ್ಲಿ ಪೂರೈಸಿ, ನಂತರ ಮಂಗಳೂರಿನ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಇ ಮುಗಿಸಿ, ಸ್ನಾತಕೋತ್ತರ ಪದವಿಯನ್ನು ಶಿವಮೊಗ್ಗದ ಜವಹಾರ್‌ಲಾಲ್ ನೆಹರು ನ್ಯಾಶನಲ್ ಕಾಲೇಜ್ ಆಪ್ ಇಂಜಿನಿಯರಿಂಗ್‌ನಲ್ಲಿ ಪೊರೈಸಿದ್ದಾರೆ. ಪ್ರಸ್ತುತ ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿ ಕಾಲೇಜಿನಲ್ಲಿ 14 ವರ್ಷಗಳಿಂದ ಉಪನ್ಯಾಸರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಪತ್ನಿ ಹವ್ಯಶ್ರೀ ಪುರ ಇವರು ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಪತಿಕೋದ್ಯಮ ವಿಭಾಗದಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.











