Wednesday, October 14, 2026
ಸುದ್ದಿ

ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ -ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ – ಕಹಳೆ ನ್ಯೂಸ್

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ಜಿಲ್ಲಾ ಮಟ್ಟದ  ಕರಾಟೆ ಸ್ಪರ್ಧೆಯು ಪದವಿಪೂರ್ವ ಕಾಲೇಜು, ತುಂಬೆ ಇಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪದಕಗಳನ್ನು ಪಡೆದುಕೊಂಡಿರುತ್ತಾರೆ.
ಬಾಲಕಿಯರ ತಂಡದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಖುಷಿ 44 ಕೆ.ಜಿ, ದ್ರಿಶ್ಯ 68 ಕೆ .ಜಿ ವಿಭಾಗ ಬೆಳ್ಳಿ ಪದಕ, ಪ್ರಥಮ ವಾಣಿಜ್ಯ ವಿಭಾಗದ ಸಾನ್ವಿ 64 ಕೆ. ಜಿ ವಿಭಾಗ ಕಂಚಿನ ಪದಕ. ಬಾಲಕರ ವಿಭಾಗದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಘನಶ್ಯಾಮ್ 50 ಕೆ.ಜಿ ವಿಭಾಗ ಬೆಳ್ಳಿ ಪದಕ ಪಡೆದಿರುತ್ತಾರೆ.

ಜಾಹೀರಾತು

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ  ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ  ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು