ಶ್ರೀರಾಮ ಪದವಿ ಪೂರ್ವ ವಿದ್ಯಾಲಯ, ಕಲ್ಲಡ ರಾಷ್ಟ್ರೀಯ ಸಂಸ್ಕಾರ ಬಾಲಿಕಾ ಶಿಬಿರ : “ಉತ್ಥಾನ” ಸಮಾರೋಪ ಸಮಾರಂಭ – ಕಹಳೆ ನ್ಯೂಸ್

ಶ್ರೀರಾಮ ಪದವಿ ಪೂರ್ವ ವಿದ್ಯಾಲಯ, ಕಲ್ಲಡದಲ್ಲಿ ಅ.09 ರಂದು ರಾಷ್ಟ್ರೀಯ ಸಂಸ್ಕಾರ ಬಾಲಿಕಾ ಶಿಬಿರ : “ಉತ್ಥಾನ” ಸಮಾರೋಪ ಸಮಾರಂಭ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀರಾಮ ವಿದ್ಯಾಕೇಂದ್ರದ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಕೃಷ್ಣಪ್ರಸಾದ್ ಕಾಯರಕಟ್ಟೆ ಮಾತನಾಡಿ, “ಶಿಬಿರದ ಸಮಾರೋಪ ಸಮಾರಂಭವು ಕೊನೆಯ ಅವಧಿಯಾಗಿರಬಹುದು. ಆದರೆ ಇಲ್ಲಿ ಪಡೆದ ಅನುಭವಗಳು, ಕಲಿತ ಹೊಸ ವಿಷಯಗಳು, ಮೌಲ್ಯಗಳು ಹಾಗೂ ಸಂಸ್ಕಾರಗಳನ್ನು ನಿಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಿಬಿರದಲ್ಲಿ ಕಲಿತ ಉತ್ತಮ ವಿಚಾರಗಳನ್ನು ಜೀವನದುದ್ದಕ್ಕೂ ಪಾಲಿಸಬೇಕು” ಎಂದು ಹೇಳಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಆಶಾಲತಾ ಸುವರ್ಣ ಮಾತನಾಡಿ, “ಶ್ರೀರಾಮ
ವಿದ್ಯಾಕೇಂದ್ರವು ಸಂಸ್ಕಾರಯುತ ಶಿಕ್ಷಣವನ್ನು ನೀಡುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿ, ಅವರನ್ನು ಜವಾಬ್ದಾರಿಯುತ ವ್ಯಕ್ತಿಗಳನ್ನಾಗಿ ರೂಪಿಸುತ್ತದೆ. ಶಿಬಿರದಲ್ಲಿ ಪಡೆದ ಅನುಭವಗಳನ್ನು ಮುಂದಿನ ಜೀವನದಲ್ಲಿ ಅಳವಡಿಸಿಕೊಂಡು, ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಿ” ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮಾತೃಭಾರತಿ ಸದಸ್ಯರಾದ ಸಿಂಧು ಉಮೇಶ್ ಸಜಿಪ, ಶಶಿಕಲಾ ಮಾವಿನಕಟ್ಟೆ ಹಾಗೂ ಪ್ರಾಂಶುಪಾಲರಾದ ಶ್ರೀ ವಸಂತ ಬಲ್ಲಾಳ್ ಉಪಸ್ಥಿತರಿದ್ದರು. ಡಾ. ಕಮಲ
ಪ್ರಭಾಕರ್ ಭಟ್, ಹೊಯ್ಸಳ ಪ್ರಾಂತದ ಕಾರ್ಯಕಾರಿಣಿ ಸಮಿತಿ ಸದಸ್ಯೆ ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ಲಕ್ಷ್ಮಿ ರಘುರಾಜ್ ಉಪಸ್ಥಿತರಿದ್ದರು. ಶಿಬಿರಾರ್ಥಿಗಳು ಶಿಬಿರದಲ್ಲಿ ತಾವು ಪಡೆದ ಅನುಭವಗಳನ್ನು ಹಾಗೂ ಕಲಿತ ವಿಷಯಗಳನ್ನು ಹಂಚಿಕೊಳ್ಳುವ ಮೂಲಕ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಶಿಬಿರದ ಸಮಗ್ರ ವರದಿಯನ್ನು
ಉಪನ್ಯಾಸಕಿಯಾದ ಚೈತನ್ಯ ಅವರು ಪ್ರಸ್ತುತಪಡಿಸಿದರು. ಶಿಬಿರಾರ್ಥಿಗಳು ಪ್ರೇರಣಾ ಗೀತೆಯನ್ನು ಹಾಡಿದರು. ಕಾರ್ಯಕ್ರಮವನ್ನು ಉಪನ್ಯಾಸಕಿಯಾದ ಶ್ವೇತ ಕೆ. ನಿರ್ವಹಿಸಿ,
ಉಪನ್ಯಾಸಕಿಯಾದ ದೀಪಿಕಾ ಎನ್, ವಂದಿಸಿದರು.











