ಗಂಜಿಮಠ ಗ್ರಾಪಂ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ : ಜನಸ್ಪಂದನೆಯೇ ಗ್ರಾಮ ಪಂಚಾಯತ್ ವ್ಯವಸ್ಥೆಯ ಮುಖ್ಯ ಉದ್ದೇಶ: ಡಾ. ಭರತ್ ಶೆಟ್ಟಿ – ಕಹಳೆ ನ್ಯೂಸ್

ಗುರುಪುರ: ಗಂಜಿಮಠ ಗ್ರಾಮ ಪಂಚಾಯತ್ನ ನೂತನ ಕಟ್ಟಡಕ್ಕೆ ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಶಂಕುಸ್ಥಾಪನೆ ನೆರವೇರಿಸಿದರು.
ಸುಮಾರು ₹1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಟ್ಟಡದ ಮೂಲಕ ಗ್ರಾಮಸ್ಥರಿಗೆ ಉತ್ತಮ ಹಾಗೂ ತ್ವರಿತ ಸೇವೆ ಒದಗಿಸುವುದು ಮುಖ್ಯವಾಗಿದೆ. ಸರ್ಕಾರಿ ಕಟ್ಟಡಗಳ ಗಾತ್ರಕ್ಕಿಂತ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ಪಂದಿಸಿ ಪರಿಹಾರ ನೀಡುವುದು ಗ್ರಾಮಾಭಿವೃದ್ಧಿಗೆ ಪ್ರಮುಖವಾಗಿದೆ ಎಂದು ಶಾಸಕರು ಹೇಳಿದರು. ನೂತನ ಕಟ್ಟಡವು ಮುಂದಿನ ಚುನಾವಣೆಗೂ ಮುನ್ನ ಉದ್ಘಾಟನೆಗೊಳ್ಳುವಂತಾಗಲಿ ಎಂದು ಆಶಿಸಿದರು.











