ಬೆಂಗಳೂರು : ಕರ್ನಾಟಕದ 20ನೇ ರಾಜ್ಯಪಾಲರಾಗಿ ಹಾಗೂ ರಾಜ್ಯದ ಎರಡನೇ ಮಹಿಳಾ ರಾಜ್ಯಪಾರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರು ನೂತನ ರಾಜ್ಯಪಾಲರಿಗೆ ಪ್ರಮಾಣ ವಚನ ಬೋಧಿಸಿದರು. ನೂತನ ರಾಜ್ಯಪಾಲರಿಗೆ ಸಿಎಂ ಡಿಕೆ ಶಿವಕುಮಾರ್, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು, ನಿರ್ಗಮಿತ ರಾಜ್ಯಪಾಲ ಗೆಹ್ಲೋಟ್ ಶುಭಾಶಯ ತಿಳಿಸಿದರು.
ವಿ.ಎಸ್. ರಮಾದೇವಿ ಅವರು 1999-2002ವರೆಗೆ ಕರ್ನಾಟಕ ಮೊದಲ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದರು. ಆ ಬಳಿಕ ಡಾ. ಸುಧಾ ಯಾದವ್ ಎರಡನೇ ಮಹಿಳಾ ರಾಜ್ಯಪಾಲರಾಗಿ ಇಂದಿನಿಂದ ಕರ್ತವ್ಯ ನಿರ್ವಹಿಸಲಿದ್ದಾರೆ.
ಪ್ರಮಾಣ ವಚನ ಸ್ವೀಕರಿಸುವ ಮುನ್ನ ಡಾ. ಸುಧಾ ಯಾದವ್ ಅವರು ಬೆಂಗಳೂರಿನ ಪ್ರಸಿದ್ಧ ರಾಷ್ಟ್ರೀಯ ಸೈನಿಕ ಸ್ಮಾರಕಕ್ಕೆ ಭೇಟಿ ನೀಡಿ, ವೀರ ಯೋಧರಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಿಸಿದರು. ಇನ್ನು ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಡಿಸಿಎಂ ಪರಮೇಶ್ವರ್, ಸಿ.ಟಿ.ರವಿ, ವಿಜಯೇಂದ್ರ ಸೇರಿ ಹಲವರು ಭಾಗವಹಿಸಿದ್ದರು.