ಪುರಲ್ದ ಅಪ್ಪೆನ ಮೋಕೆದ ಬೊಳ್ಳಿಲು ಪೊಳಲಿ ಟೈಗರ್ಸ್ ತಂಡದ ಮುಡಿಗೇರಿದ ಕುಡ್ಲದ ಪಿಲಿಪರ್ಬ- 2026 ರ ಕಿರೀಟ- ಕಹಳೆ ನ್ಯೂಸ್

ಮಾಜಿ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕ ಡಿ. ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿ ಕೇಂದ್ರ ಮೈದಾನದಲ್ಲಿ ಅದ್ದೂರಿಯಾಗಿ ನಡೆದ ಕುಡ್ಲದ ಪಿಲಿಪರ್ಬ-2026 ಸೀಸನ್-5 ಮುಕ್ತಾಯಗೊಂಡಿದ್ದು,11 ತಂಡಗಳ ನಡುವಿನ ಜಿದ್ದಾಜಿದ್ದಿನ ಸ್ಪರ್ಧಾಕೂಟದಲ್ಲಿ ಅಂತಿಮವಾಗಿ ಪುರಲ್ದ ಅಪ್ಪೆನ ಮೋಕೆದ ಬೊಳ್ಳಿಲು ಪೊಳಲಿ ಟೈಗರ್ಸ್ ತಂಡವು ಪ್ರತಿಷ್ಠಿತ ಪಿಲಿಪರ್ಬ- 2026 ರ ಕಿರೀಟ ಮುಡಿಗೇರಿಸಿಕೊಂಡಿತು.
ದ್ವಿತೀಯ ಸ್ಥಾನದ ಪ್ರಶಸ್ತಿಯನ್ನು ನಂದಿಗುಡ್ಡ ಫ್ರೆಂಡ್ಸ್ ಹುಲಿ ಬಾಬುಗುಡ್ಡ ತಂಡವು ಪಡೆದುಕೊಂಡರೆ, ತೃತೀಯ ಸ್ಥಾನವನ್ನು ರಾಜ್ ಫ್ರೆಂಡ್ಸ್ ಪೊಳಲಿ ಪುರಲ್ದ ಅಪ್ಪೆನ ಮೋಕೆದ ಜೋಕುಲು ಮತ್ತು ಕಾರ್ಕಳ ಟೈಗರ್ಸ್ ಪ್ರಶಾಂತ್ ಕಾಮತ್ ಅಭಿಮಾನಿ ಬಳಗವು ಜಂಟಿಯಾಗಿ ಅಲಂಕರಿಸಿದವು.
ಪಿಲಿಪರ್ಬದ ವಿಶೇಷ ಬಹುಮಾನಗಳಾದ “ಕಪ್ಪು ಪಿಲಿ” ಪ್ರಶಸ್ತಿಯನ್ನು ಟ್ಯಾಲೆಂಟ್ ಟೈಗರ್ಸ್ MYB ಕಚ್ಚೂರು ಮಾಲ್ತಿದೇವಿ ಅಪ್ಪೆನ ಮೋಕೆದ ಜೋಕುಲು ತಂಡ ಪಡೆದುಕೊಂಡರೆ, “ಮರಿ ಹುಲಿ” ಪ್ರಶಸ್ತಿಯನ್ನು ರಾಜ್ ಫ್ರೆಂಡ್ಸ್ ಪೊಳಲಿ ಪುರಲ್ದ ಅಪ್ಪೆನ ಮೋಕೆದ ಜೋಕುಲು ಹಾಗೂ ಕಾರ್ಕಳ ಟೈಗರ್ಸ್ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ಜಂಟಿಯಾಗಿ ಪಡೆದುಕೊಂಡಿತು. ಬಹುನಿರೀಕ್ಷಿತ ಪ್ರಶಸ್ತಿಯಾದ “ಪರ್ಬದ ಪಿಲಿ”ಯನ್ನು ಫ್ರೆಂಡ್ಸ್ ಬಪ್ಪಲ್ ಶ್ರೀ ದುರ್ಗಾಪರಮೇಶ್ವರಿ ಹುಲಿ ಪಡೆದುಕೊಂಡಿತು.
ಶಿಸ್ತಿನ ತಂಡವಾಗಿ ಪಾಂಡೇಶ್ವರ ಶಾರದಾ ಹುಲಿ ಹೊರ ಹೊಮ್ಮಿದರೆ, ತಾಸೆ ಹಿಮ್ಮೇಳ ವಿಭಾಗದಲ್ಲಿ ಪುರಲ್ದ ಅಪ್ಪೆನ ಮೋಕೆದ ಬೊಳ್ಳಿಲು ಪೊಳಲಿ ಟೈಗರ್ಸ್, ಬಣ್ಣಗಾರಿಕೆ ಹಾಗೂ ಮುಡಿ ವಿಭಾಗದಲ್ಲಿ ಫ್ರೆಂಡ್ಸ್ ಬಪ್ಪಲ್ ಶ್ರೀ ದುರ್ಗಾಪರಮೇಶ್ವರಿ ಹುಲಿ ಪ್ರಶಸ್ತಿ ಪಡೆದುಕೊಂಡರೆ, ಮೆರವಣಿಗೆ ವಿಭಾಗ ಮತ್ತು ಧರಣಿ ಮಂಡಲ ಪ್ರಶಸ್ತಿಯನ್ನು ಹನುಮಾನ್ ಟೈಗರ್ಸ್ ಉಪ್ಪಳ ಬಾಚಿಕೊಂಡಿತು. ಕೊನೆಯದಾಗಿ ಭಾಗವಹಿಸಿದ ಎಲ್ಲಾ ತಂಡಗಳಿಗೂ ಪ್ರೋತ್ಸಾಹ ಧನ ನೀಡಿ ಗೌರವಿಸುವ ಮೂಲಕ ಐದನೇ ಆವೃತ್ತಿಯ ಪಿಲಿಪರ್ಬಕ್ಕೆ ತೆರೆ ಬಿದ್ದಿತು.
ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಜಿಲ್ಲಾಧಿಕಾರಿಗಳಾದ ದರ್ಶನ್ ಎಚ್ ವಿ, ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ, ಪಾಲಿಕೆ ಆಯುಕ್ತರಾದ ರಾಹುಲ್ ರತ್ನಂ ಪಾಂಡೆ, ಶಾಸಕರುಗಳಾದ ಡಾ.ಭರತ್ ಶೆಟ್ಟಿ, ಕಿಶೋರ್ ಕುಮಾರ್ ಪುತ್ತೂರು, ಚಲನಚಿತ್ರ ತಾರೆಯರಾದ ಶೈನ್ ಶೆಟ್ಟಿ, ಅರ್ಜುನ್ ದೇವ್, ತನ್ವಿ ರಾಮ್, ರೂಪಶ್ರೀ ವರ್ಕಾಡಿ, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ನರೇಶ್ ಶೆಣೈ, ಅಶ್ವಿತ್ ಕೊಟ್ಟಾರಿ, ಲಲಿತ್ ಮೆಂಡನ್, ಕಿರಣ್ ಶೆಣೈ, ಚೇತನ್ ಕಾಮತ್, ಸಹಾನ್, ಜಗದೀಶ್ ಕದ್ರಿ, ನರೇಶ್ ಪ್ರಭು, ಸೇರಿದಂತೆ ಕುಡ್ಲ ಪ್ರತಿಷ್ಠಾನದ ಪ್ರಮುಖರು, ಬಿಜೆಪಿ ಪ್ರಮುಖರು ಸಹಿತ ಸಾವಿರಾರು ಮಂದಿ ಉಪಸ್ಥಿತರಿದ್ದರು.











