Thursday, October 22, 2026
ಸುದ್ದಿ

ಬೆಳ್ತಂಗಡಿ : ಅಕ್ರಮ ಕೋಳಿಅಂಕಕ್ಕೆ ಪೊಲೀಸರ ದಾಳಿ – ನಾಲ್ವರು ವಶಕ್ಕೆ – ಕಹಳೆ ನ್ಯೂಸ್

ಬೆಳ್ತಂಗಡಿ : ಅಂಡಿಂಜೆ ಗ್ರಾಮದ ಕಾಣಲಚ್ಚಿ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಮೋಹನ ಗೌಡ (45), ದಿನೇಶ್ (45), ಪ್ರಶಾಂತ್ (35) ಹಾಗೂ ಧೀರಜ್ ಎಂದು ಗುರುತಿಸಲಾಗಿದೆ.

ಜಾಹೀರಾತು

ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ವೇಣೂರು ಪೊಲೀಸ್ ಠಾಣೆಯ ಪಿಎಸ್‌ಐ ಅಕ್ಷಯ ಡವಗಿ ಅವರಿಗೆ ಲಭಿಸಿದ ಮಾಹಿತಿಯಂತೆ ಪೊಲೀಸರು ದಾಳಿ ನಡೆಸಿದ್ದು, ಈವೇಳೆ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿರುವುದು ದೃಢಪಟ್ಟಿದೆ. ಪೊಲೀಸರು ದಾಳಿ ನಡೆಸಿದ ವೇಳೆ ಕೆಲವರು ಪರಾರಿಯಾಗಿದ್ದು, ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಳದಲ್ಲಿದ್ದ 7 ಅಂಕದ ಕೋಳಿಗಳು, 3 ದ್ವಿಚಕ್ರ ವಾಹನಗಳು ಹಾಗೂ ಒಂದು ಆಟೋರಿಕ್ಷಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.