ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ- ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು: ವಿದ್ಯಾಭಾರತಿಯ 33ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟವು ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದ್ದು, ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿ ಸಾಥ್ವಿ 17ರ ವಯೋಮಾನದಲ್ಲಿ ಕರ್ನಾಟಕ ದಕ್ಷಿಣ ಮಧ್ಯ ಕ್ಷೇತ್ರ ತಂಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರನ್ನು ಹಾಗೂ ವಿದ್ಯಾರ್ಥಿಯನ್ನು ಪಟ್ಟೆ ವಿದ್ಯಾ ಸಂಸ್ಥೆಗಳ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಶಾಲಾ ಮುಖ್ಯ ಗುರುಗಳು ಹಾಗೂ ಶಿಕ್ಷಕ ವೃಂದ, ಅಭಿನಂದಿಸಿದ್ದಾರೆ.











