Sunday, November 1, 2026
ಸುದ್ದಿ

ಮಂಗಳೂರು : ಡಿಸಿಎಂ ಪರಮೇಶ್ವರ್ ಆರೋಗ್ಯ ಚೇತರಿಕೆಗೆ ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ – ಕಹಳೆ ನ್ಯೂಸ್

ಮಂಗಳೂರು : ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಶೀಘ್ರ ಗುಣಮುಖರಾಗಿ ಮತ್ತೆ ಜನಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿ ಎಂಬ ಸದಾಶಯದೊಂದಿಗೆ ಮಂಗಳೂರಿನ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಫಾಯಿ ಕರ್ಮಚಾರಿ ಘಟಕದ ಜಿಲ್ಲಾಧ್ಯಕ್ಷ ಪ್ರೇಮ್ ನಾಥ್ ಪಿ.ಬಿ. ಬಳ್ಳಾಲ್‌ಬಾಗ್ ಅವರ ನೇತೃತ್ವದಲ್ಲಿ ಶನಿವಾರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು. ಡಾ. ಜಿ. ಪರಮೇಶ್ವರ್ ಅವರು ಆದಷ್ಟು ಬೇಗ ಅನಾರೋಗ್ಯದಿಂದ ಚೇತರಿಸಿಕೊಂಡು ಉತ್ತಮ ಆರೋಗ್ಯದೊಂದಿಗೆ ತಮ್ಮ ಕರ್ತವ್ಯಗಳಿಗೆ ಮರಳಲಿ ಎಂದು ಈ ಸಂದರ್ಭದಲ್ಲಿ ದೇವರಲ್ಲಿ ಪ್ರಾರ್ಥಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಮಾಜಿ ಮೇಯರ್ ಎಂ. ಶಶಿಧರ್ ಹೆಗ್ಡೆ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆಡಳಿತ ಸಮಿತಿಯ ಟ್ರಸ್ಟಿ ಅಭಿಲಾಷ್, ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಪ್ರೀತಾ ನಂದನ್, ರಾಜೇಂದ್ರ ಚಿಲಿಂಬಿ, ಕಿರಣ್ ಕೊಡಿಯಾಲ್ ಬೈಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.