ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ : 3.ಕೆ.ಜಿ 800 ಗ್ರಾಂ ತೂಕದ ಅಕ್ರಮ ಗಾಂಜಾ ವಶ- ಕಹಳೆ ನ್ಯೂಸ್

ಮಂಗಳೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಓರ್ವನನ್ನು ಬಂಧಿಸಿ 3.ಕೆ.ಜಿ 800 ಗ್ರಾಂ ತೂಕದ ಗಾಂಜಾ ವನ್ನು ಪಣಂಬೂರು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿ ಪುತ್ತೂರು ತಾಲ್ಲೂಕು ಪಡ್ನೂರ್ ಪೋಸ್ಟ್ ಪಡ್ಡಾಯೂರ್ ಹೌಸ್ನ ಮೊಹಮ್ಮದ್ ನಿಸಾರ್ (23) ಎಂದು ಗುರುತಿಸಲಾಗಿದೆ.
ನ. 05 ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ,ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಹತ್ತಿರ ಗಾಂಜಾವನ್ನು ಮಾರಾಟ ಮಾಡಲು ತಂದಿರುವ ಬಗ್ಗೆ ಮಾಹಿತಿ ಪಡೆದು ಉತ್ತರ ಉಪ ವಿಭಾಗದ ಎ.ಸಿ.ಪಿ. ರವರ ತಂಡದ ಅಧಿಕಾರಿ ಸಿಬ್ಬಂದಿ ಹಾಗೂ ಪಣಂಬೂರು ಠಾಣಾ ಅಧಿಕಾರಿ ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.
ಆರೋಪಿಯಿಂದ ಸುಮಾರು 3.ಕೆ.ಜಿ 800ಗ್ರಾಂ ಗಾಂಜಾ (ಅಂದಾಜು ಮೌಲ್ಯ ರೂ.1,90,000/- ) ಮತ್ತು 1 ಮೊಬೈಲ್ ಪೋನ್ (ಅಂದಾಜು ಮೌಲ್ಯ ರೂ. 4000 /-) ನ್ನು ಹಾಗೂ ಗಾಂಜಾ ಸಾಗಿಸಲು ಬಳಸಿದ ಕಾರ್ KL14 1662 (ಅಂದಾಜು ಮೌಲ್ಯ ರೂ. 2,00,000) ಸ್ವಾಧೀನಪಡಿಸಿಕೊಳ್ಲಲಾಗಿದೆ.
ಆರೋಪಿತನು ಗಾಂಜಾವನ್ನು ಸುರತ್ಕಲ್, ಪಣಂಬೂರು, ಕಾವೂರು ಹಾಗೂ ಮಂಗಳೂರು ನಗರದ ಪ್ರಮುಖ ಸ್ಥಳಗಳಲ್ಲಿ ಮಾರಾಟ ಮಾಡುತ್ತಿದ್ದುದಾಗಿ ತಿಳಿದು ಬಂದಿದ್ದು, ಈ ಹಿಂದೆ ಕೂಡಾ ಹಲವು ಭಾರಿ ಗಾಂಜಾವನ್ನು ಮಂಗಳೂರು ನಗರದಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾನೆ.
ಆರೋಪಿತನಿಂದ ಸ್ವಾಧೀನಪಡಿಸಿಕೊಳ್ಳಲಾದ ಗಾಂಜಾ, ಮೊಬೈಲ್ ಮತ್ತು ಕಾರ್ ನ ಒಟ್ಟು ಮೌಲ್ಯ 3,94,000 ರೂಗಳಾಗಿದ್ದು, ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 137/2026 ಕಲಂ: 8(C), 20(b),(ii)(A) NDPS Act ನಂತೆ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ.











