ಮಂಗಳೂರು: ಕಣ್ಣೂರಿನಲ್ಲಿ ಅನಿಲ ಸಿಲಿಂಡರ್ ಲಾರಿ ಪಲ್ಟಿ; ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತ – ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ಸಮೀಪದ ಕಣ್ಣೂರು ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ತಡರಾತ್ರಿ ಅನಿಲ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿದ್ದು, ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ, ಕಣ್ಣೂರಿನ ಮಸೀದಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗಡ್ಡಲಾಗಿ ಪಲ್ಟಿಯಾಗಿದೆ. ಪರಿಣಾಮವಾಗಿ ಹೆದ್ದಾರಿಯಲ್ಲಿ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತು ಸಂಚಾರ ದಟ್ಟಣೆ ಉಂಟಾಯಿತು.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಧಾವಿಸಿ, ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಸಂಚಾರ ದಟ್ಟಣೆಯನ್ನು ಸುಧಾರಿಸಲು ಮಂಗಳೂರು ಸಂಚಾರ ಪೊಲೀಸರು ಪರ್ಯಾಯ ಮಾರ್ಗಗಳ ಮೂಲಕ ವಾಹನಗಳನ್ನು ಸಂಚರಿಸಲು ಸೂಕ್ತ ವ್ಯವಸ್ಥೆ ಕೈಗೊಂಡರು.











