Sunday, November 8, 2026
ಸುದ್ದಿ

ಕೃಷ್ಣಾಪುರದಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಶಾಸಕ ಡಾ. ವೈ. ಭರತ್ ಶೆಟ್ಟಿಯವರಿಂದ ಗುದ್ದಲಿ ಪೂಜೆ- ಕಹಳೆ ನ್ಯೂಸ್

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕೃಷ್ಣಾಪುರ 4ನೇ ಬ್ಲಾಕ್‌ನಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕಟ್ಟಡಕ್ಕೆ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಗುದ್ದಲಿ ಪೂಜೆ ನೆರವೇರಿಸಿ, ಕಾಮಗಾರಿಗೆ ಚಾಲನೆ ನೀಡಿದರು.
ಕಳೆದ 32 ವರ್ಷಗಳಿಂದ ಸ್ಥಳೀಯ ಯುವಕ ಸಂಘವು ಅಂಗನವಾಡಿಯ ನಿರ್ವಹಣೆಯ ಜವಾಬ್ದಾರಿಯನ್ನು ವಹಿಸಿಕೊಂಡು ಮಕ್ಕಳ ಕಲಿಕೆಗೆ ಹಾಗೂ ಆರೈಕೆಗೆ ಸಹಕಾರ ನೀಡುತ್ತಾ ಬಂದಿರುವುದನ್ನು ಶಾಸಕರು ವಿಶೇಷವಾಗಿ ಸ್ಮರಿಸಿ, ಸಂಘದ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು.
ನೂತನ ಅಂಗನವಾಡಿ ಕಟ್ಟಡ ನಿರ್ಮಾಣದಿಂದ ಸ್ಥಳೀಯ ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ಹಾಗೂ ಅಗತ್ಯ ಸೌಲಭ್ಯಗಳು ದೊರೆಯಲಿದ್ದು, ಈ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಶಾಸಕರು ಆಶಯ ವ್ಯಕ್ತಪಡಿಸಿದರು.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು