
ಬೆಳ್ತಂಗಡಿ : ಮಲವಂತಿಗೆ ಗ್ರಾಮದ ಬಾಳೆಹಿತ್ತಿಲು ಎಂಬಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಬಾಳೆಹಿತ್ತಿಲು ನಿವಾಸಿ ಪುನೀತ್ ಅಲಿಯಾಸ್ ಪುರುಷೋತ್ತಮ್ ಗೌಡ ಮೃತಪಟ್ಟ ಯುವಕ. ಇವರು ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಬೆಳ್ತಂಗಡಿ ಶಾಖೆಯಲ್ಲಿ ಪಿಗ್ಮಿ ಸಂಗ್ರಹಕಾರರಾಗಿ (Pigmy Collector) ಕಾರ್ಯನಿರ್ವಹಿಸುತ್ತಿದ್ದರು.
ಕೆಲಸಕ್ಕೆ ರಜೆ ಹಾಕಿದ್ದ ಪುನೀತ್, ದೀಪಾವಳಿ ಹಬ್ಬದ ಪ್ರಯುಕ್ತ ತಮ್ಮ ಸಹೋದರರು ಹಾಗೂ ಸಂಬಂಧಿಕರೊಂದಿಗೆ ಲವಲವಿಕೆಯಿಂದ ಮತ್ತು ಉತ್ಸಾಹದಿಂದಲೇ ಕಾಲ ಕಳೆದಿದ್ದರು. ಆದರೆ, ಬುಧವಾರ ರಾತ್ರಿ 9.30ರ ಸುಮಾರಿಗೆ ಏಕಾಏಕಿ ಮನೆಯ ಸಮೀಪದ ತೋಟಕ್ಕೆ ತೆರಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಯುವಕನ ಈ ನಿರ್ಧಾರಕ್ಕೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.











