
ಮಂಗಳೂರು : ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ವತಿಯಿಂದ ಪದವಿಪೂರ್ವ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕಾಗಿ ರಾಜ್ಯಮಟ್ಟದ INSPIRE-2026 ತಾಂತ್ರಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಉತ್ಸವವನ್ನು ನವೆಂಬರ್ 14ರಂದು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸತೀಶ್ ಬಿ. ನಾಯ್ಡ್ ಉದ್ಘಾಟಿಸಲಿದ್ದು, ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಎ. ಶ್ರೀನಿವಾಸ್ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಉತ್ಸವದಲ್ಲಿ ರಾಜ್ಯದ ವಿವಿಧ ಕಾಲೇಜುಗಳ 1,500ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ. ತಾಂತ್ರಿಕ ವಿಭಾಗದಲ್ಲಿ ಐಡಿಯಾ ಪಿಚಿಂಗ್, ವಿಜ್ಞಾನ ಮಾದರಿ ಪ್ರದರ್ಶನ, ರಸಪ್ರಶ್ನೆ, ಕ್ರೀಡಾ ವಿಭಾಗದಲ್ಲಿ ಕ್ರಿಕೆಟ್, ವಾಲಿಬಾಲ್, ಕಬಡ್ಡಿ, ಬ್ಯಾಡ್ಮಿಂಟನ್ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಲಿವೆ. ಸಾಂಸ್ಕೃತಿಕ ವಿಭಾಗದಲ್ಲಿಯೂ ಹಲವು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ವಿಜೇತರಿಗೆ ನಗದು ಬಹುಮಾನ, ಪ್ರಮಾಣಪತ್ರ ಹಾಗೂ ಟ್ರೋಫಿಗಳನ್ನು ನೀಡಿ ಗೌರವಿಸಲಾಗುವುದು.
ನವೆಂಬರ್ 14ರಂದು ಬೆಳಿಗ್ಗೆ 10 ಗಂಟೆಗೆ ಮುಕ್ಕದ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಎನ್. ಹೆಗ್ಡೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.











