Saturday, November 14, 2026
ಸುದ್ದಿ

ಮಂಗಳೂರು: ತೆರಿಗೆ ವಸೂಲಾತಿ ಅಭಿಯಾನ: ನಗರದ ಅಂಗಡಿ, ವಾಣಿಜ್ಯ ಸಂಕೀರ್ಣಗಳಿಗೆ ಪಾಲಿಕೆ ಅಧಿಕಾರಿಗಳ ಭೇಟಿ – ಕಹಳೆ ನ್ಯೂಸ್

ಮಂಗಳೂರು : ತೆರಿಗೆ ವಸೂಲಾತಿ ಅಭಿಯಾನದ ಅಂಗವಾಗಿ ಮಂಗಳೂರು ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಅಧಿಕಾರಿಗಳು ಶುಕ್ರವಾರ, ನವೆಂಬರ್ 13ರಂದು ನಗರದ ವಿವಿಧ ಅಂಗಡಿಗಳು, ವಾಣಿಜ್ಯ ಸಂಕೀರ್ಣಗಳು, ಸಂಸ್ಥೆಗಳು ಹಾಗೂ ಸಂಘಟನೆಗಳಿಗೆ ಭೇಟಿ ನೀಡಿದರು.

ಜಾಹೀರಾತು

ಈ ಸಂದರ್ಭದಲ್ಲಿ ಅಂಗಡಿ ಮಾಲೀಕರು ಹಾಗೂ ಸಿಬ್ಬಂದಿಯನ್ನು ಭೇಟಿಯಾದ ಅಧಿಕಾರಿಗಳು, ಆಸ್ತಿ ತೆರಿಗೆ ಮತ್ತು ವ್ಯಾಪಾರ ತೆರಿಗೆಗೆ ಸಂಬಂಧಿಸಿದ ವಿವರಗಳನ್ನು ತಿಳಿಸಿದರು. ನಿಗದಿತ ಸಮಯದೊಳಗೆ ತೆರಿಗೆ ಪಾವತಿಸುವ ಮೂಲಕ ಕಾನೂನು ಕ್ರಮಗಳಿಗೆ ಅವಕಾಶ ಮಾಡಿಕೊಡದಂತೆ ಸಂಬಂಧಪಟ್ಟ ಮಾಲೀಕರಿಗೆ ಮನವಿ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇದೇ ವೇಳೆ ತೆರಿಗೆ ಪಾವತಿ ಹಾಗೂ ವಸೂಲಾತಿಗೆ ಸಂಬಂಧಿಸಿದ ವ್ಯತ್ಯಾಸಗಳು ಮತ್ತು ಲೋಪದೋಷಗಳನ್ನೂ ಅಧಿಕಾರಿಗಳು ಪರಿಶೀಲಿಸಿದರು. ಈ ಅಭಿಯಾನದಲ್ಲಿ ಉಪ ಆಯುಕ್ತರು (ಕಂದಾಯ), ವಲಯ ಆಯುಕ್ತರು, ಕಂದಾಯ ನಿರೀಕ್ಷಕರು ಹಾಗೂ ಕಂದಾಯ ಮೇಲ್ವಿಚಾರಕರು ಉಪಸ್ಥಿತರಿದ್ದರು.