Sunday, November 15, 2026
ಸುದ್ದಿ

ಮಂಗಳೂರು : ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾ ವಲಸಿಗರು ವಶಕ್ಕೆ – ಕಹಳೆ ನ್ಯೂಸ್

ಮಂಗಳೂರು : ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿ, ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಪಣಂಬೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಎಂದು ಗುರುತಿಸಲಾಗಿದೆ.

ಜಾಹೀರಾತು

ಖಚಿತ ಮಾಹಿತಿಯ ಮೇರೆಗೆ ಪಣಂಬೂರು ಪೊಲೀಸ್ ಇನ್‌ಸ್ಪೆಕ್ಟರ್ ಸಲೀಂ ಅಬ್ಬಾಸ್ ನೇತೃತ್ವದ ತಂಡ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಈ ವೇಳೆ ಅವರು ಅಕ್ರಮವಾಗಿ ನೆಲೆಸಿರುವುದು ದೃಢಪಟ್ಟಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯ ಇಬ್ಬರನ್ನೂ ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿ ಇರಿಸಲಾಗಿದ್ದು, ಮುಂದೆ FRRO ಮುಂದೆ ಹಾಜರುಪಡಿಸಿ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲು ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಪಿಎಸ್‌ಐಗಳಾದ ಶ್ರೀಕಲಾ ಕೆ.ಟಿ., ಜ್ಞಾನಶೇಖರ ಹಾಗೂ ಸಿಬ್ಬಂದಿಗಳಾದ ಇಮ್ತಿಯಾಝ್, ಫಕ್ಕಿರೇಶ್ ಮತ್ತು ರಾಕೇಶ್ ಎಲ್.ಎಂ. ಪಾಲ್ಗೊಂಡಿದ್ದರು.