ಪಂಚಮುಖಿ ಆಂಜನೇಯ ಹವನದ ಪ್ರಚಾರಕ್ಕೆ ಆರ್. ಅಶೋಕ್ ಚಾಲನೆ : ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಂಟಿಸುವ ಮೂಲಕ ಅಭಿಯಾನಕ್ಕೆ ಚಾಲನೆ – ಕಹಳೆ ನ್ಯೂಸ್

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ಈ ಧಾರ್ಮಿಕ ಕಾರ್ಯಕ್ರಮದ ಪ್ರಚಾರಾರ್ಥ ಹಮ್ಮಿಕೊಳ್ಳಲಾದ ಆಟೋ ರಿಕ್ಷಾ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಚಾಲನೆ ನೀಡಿದರು.
ನವೆಂಬರ್ 19ರಂದು ಖಾಸಗಿ ಕಾರ್ಯಕ್ರಮದ ನಿಮಿತ್ತ ಪುತ್ತೂರಿಗೆ ಆಗಮಿಸಿದ್ದ ಆರ್. ಅಶೋಕ್ ಅವರು ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಆಟೋ ರಿಕ್ಷಾಗಳಿಗೆ ಸ್ವತಃ ಸ್ಟಿಕ್ಕರ್ ಅಂಟಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ಆಟೋ ರಿಕ್ಷಾಗಳ ಮುಂಭಾಗ ಹಾಗೂ ಹಿಂಭಾಗಕ್ಕೆ ಸ್ಟಿಕ್ಕರ್ ಅಂಟಿಸಿ, ಪಂಚಮುಖಿ ಆಂಜನೇಯ ಹವನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಆಟೋ ಚಾಲಕರು ಮತ್ತು ಮಾಲಕರಲ್ಲಿ ಮನವಿ ಮಾಡಿದರು. ಅಲ್ಲದೆ, ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಯಾಗ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಡ, ಶ್ರೀಧರ್ ತೆಂಕಿಲ ಸೇರಿದಂತೆ ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರು ಉಪಸ್ಥಿತರಿದ್ದರು.











