ಡಾ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವಿಟ್ಲ ತಾಲೂಕಿನಲ್ಲಿ ವಿವಿಧ ಸೇವಾ ಕಾರ್ಯಕ್ರಮ – ಕಹಳೆ ನ್ಯೂಸ್

ವಿಟ್ಲ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ವಲಯದ 10 ಅಶಕ್ತ ಕುಟುಂಬಗಳಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ವಿಟ್ಲದ ಎಂಡೋಸಲ್ಫಾನ್ ಪೀಡಿತ ಮಕ್ಕಳ ಪಾಲನಾ ಕೇಂದ್ರದ ಮಕ್ಕಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಮೊಂತಿಮಾರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕುಂಕುಮಾರ್ಚನೆ ಹಾಗೂ ಪಂಚಕಜ್ಜಾಯ ಸೇವೆ, ಸಾಲೆತ್ತೂರು ಶಿವಗಿರಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಕುಂಕುಮಾರ್ಚನೆ ಮತ್ತು ಸರ್ವಸೇವೆ ನೆರವೇರಿಸಲಾಯಿತು. ಮುಡಿಪು ಮಂಜುನಾಥ ಭಟ್ ಅವರಿಗೆ ದಿನಸಿ ಸಾಮಗ್ರಿ ಹಾಗೂ ಹಣ್ಣುಹಂಪಲು ವಿತರಿಸಲಾಯಿತು.
ಇದಲ್ಲದೆ ಕಲ್ಲಡ್ಕ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ನಿತ್ಯಪೂಜೆ, ನೆಟ್ಲ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ವಿಶೇಷ ಪೂಜೆ, ಕೇಪು ಬನಾರಿ ಗೋಪಾಲಕೃಷ್ಣ ದೇವಸ್ಥಾನ ಹಾಗೂ ಕೇಪು ಉಳ್ಳಾಲ್ತಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಮಾಣಿ ಕರಿಂಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸರ್ವಸೇವೆ ಮತ್ತು ಮಾಮೇಶ್ವರ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.
ಈ ಮೂಲಕ ಧಾರ್ಮಿಕ ಸೇವೆಯೊಂದಿಗೆ ಸಮಾಜಮುಖಿ ಕಾರ್ಯಗಳ ಮೂಲಕ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.











