Saturday, November 28, 2026
ಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ  ಖುಷಿ ಕೆ. ಎಂ ರಾಷ್ಟ್ರ ಮಟ್ಟದಲ್ಲಿ ಸಾಧನೆ – ಕಹಳೆ ನ್ಯೂಸ್

ಮಧ್ಯಪ್ರದೇಶದ ದೇವಾಸ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ  ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ. ಇವರು ಬೆಳ್ಳಿಪಾಡಿ ಗ್ರಾಮದ ಶ್ರೀ ಶಂಕರನಾರಾಯಣ ನಿವಾಸಿ ಕೆ. ವಿ  ಮಂಜುನಾಥ ಮತ್ತು ಭವ್ಯ ದಂಪತಿಯ
ಪುತ್ರಿಯಾಗಿರುತ್ತಾರೆ.

ಜಾಹೀರಾತು

ಇವರು ಕಾಲೇಜಿನ ಧೈಹಿಕ ಶಿಕ್ಷಣ ನಿರ್ದೇಶಕರಾದ  ರವಿಶಂಕರ್ , ಡಾ. ಜ್ಯೋತಿ ಮತ್ತು ಯತೀಶ್ ಇವರ  ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ.
ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು  ಹಾಗೂ ಉಪನ್ಯಾಸಕ , ಉಪನ್ಯಾಸಕೇತರ ವೃಂದದವರು  ಅಭಿನAದಿಸಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು