Saturday, November 28, 2026
ಸುದ್ದಿ

ಚಿಕ್ಕಪ್ಪನನ್ನು ಹತ್ಯೆಗೈದ ಯುವತಿಗೆ ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ವಿಟ್ಲ: ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ರಿಶಿಕಾ (24)ಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು

ಚೆನ್ನಯ್ಯ ಪೂಜಾರಿ ಕಂಠಪೂರ್ತಿ ಕುಡಿದು ಆತನ ಅಣ್ಣನ ಮಗಳಿಗೆ ತೊಂದರೆ ಕೊಡುತ್ತಿದ್ದನೆನ್ನಲಾಗಿದೆ. ಈ ಸಂದರ್ಭದಲ್ಲಿ ಕತ್ತಿಯನ್ನು ಬೀಸಿದ್ದಾಳೆ. ಅದು ಆತನ ಎದೆಗೆ ತಾಗಿ ಗಂಭೀರವಾಗಿ ಗಾಯಗೊಂಡಿದ್ದ.
ಆತನನ್ನು ಕೂಡಲೇ ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ವರ್ಗಾಯಿಸಿದ್ದರೂ ಅಲ್ಲಿ ಮೃತ ಮಟ್ಟಿರುವುದಾಗಿ ದೃಢ ಪಡಿಸಿದ್ದಾರೆ. ಕುಟುಂಬದೊಳಗಿನ ಕಲಹ ಕೊಲೆಯಲ್ಲಿ ಮುಕ್ತಾಯಗೊಂಡಿದೆ. ಆರೋಪಿ ಹೃಶಿಕಾಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆಕೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು