Recent Posts

Saturday, April 25, 2026
ಸುದ್ದಿ

Big Breaking News – ಕಮ್ಯುನಿಸ್ಟ್ ಬಂಟ್ವಾಳ ಸಮಿತಿಯ ಕಚೇರಿಗೆ ಕಿಡಿಗೇಡಿಗಳಿಂದ ಬೆಂಕಿ – ಕಹಳೆ ನ್ಯೂಸ್

ಬಂಟ್ವಾಳ: ಕಮ್ಯುನಿಸ್ಟ್ ಬಂಟ್ವಾಳ ಸಮಿತಿಯ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಾಕಿದ ಘಟನೆ ಬುಧವಾರ ರಾತ್ರಿ ನಡೆದಿದ್ದು, ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ‌.

ಬಿ.ಸಿ.ರೋಡಿನ ಬೈಪಾಸ್ ನ ನಾಲ್ಕು ಮಾರ್ಗದ ಬಳಿ ಕಾರ್ಯಾಚರಿಸುತ್ತಿರುವ ಕಮ್ಯುನಿಸ್ಟ್ ಬಂಟ್ವಾಳ ಸಮಿತಿಯ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಚೇರಿಯ ಸಿಬ್ಬಂದಿ ಇಂದು ಬೆಳಿಗ್ಗೆ ಕಚೇರಿಗೆ ತರಳಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಘಟನೆಯಿಂದ ಕಚೇರಿಯೊಳಗಿದ್ದ ಸಂಘಕ್ಕೆ ಸಂಬಂಧ ಪಟ್ಟ ಕಡತಗಳು ಹಾಗೂ ಮುಖ್ಯವಾದ ಅರ್ಜಿಗಳು, ವಿದ್ಯಾರ್ಥಿ ವೇತನದ ಸಂಬಂಧಿಸಿದ ದಾಖಲೆಗಳು ಸುಟ್ಟು ಕರಕಲಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಬಂಟ್ವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಶಬರಿಮಲೆ ವಿವಾದದ ಹಿನ್ನೆಲೆಯಲ್ಲಿ ಇಂದು ಕೇರಳದಲ್ಲಿ ಹರತಾಳ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಕೃತ್ಯ ಎಸಯಲಾಗಿದೆ ಎಂದು ಶಂಕಿಸಲಾಗಿದೆ.

ಸ್ಥಳ ದಲ್ಲಿ ಬಂಟ್ವಾಳ ಎ.ಎಸ್.ಪಿ.ಸೈದುಲ್ ಅಡಾವತ್, ಬಂಟ್ವಾಳ ವ್ರತ್ತ ನಿರೀಕ್ಷಕ ಟಿ.ಡಿ.ನಾಗರಾಜ್, ಬಂಟ್ವಾಳ ನಗರ ಠಾಣಾ ಎಸ್. ಐ.ಚಂದ್ರಶೇಖರ್, ಅಪರಾದ ವಿಭಾಗದ ಎಸ್.ಐ.ಹರೀಶ್ ಮೊಕ್ಕಾಂ ಹೂಡಿದ್ದು ಬಿಗಿ ಭದ್ರತೆ ಒದಗಿಸಿದ್ದಾರೆ.