Friday, March 13, 2026
ಸುದ್ದಿ

ಭೀಕರ ಅಪಘಾತ: ಅಯ್ಯಪ್ಪ ಮಾಲಾಧಾರಿಗಳು ಅಪಘಾತದಲ್ಲಿ ಬಲಿ – ಕಹಳೆ ನ್ಯೂಸ್

ಪುದುಕೋಟ್ಟೈ: ತಮಿಳುನಾಡಿನ ಪುದುಕೋಟ್ಟೈ ಜಿಲ್ಲೆಯ ತಿರುಮಯಂ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಒಂಭತ್ತು ಶಬರಿಮಲೆ ಯಾತ್ರಿಗಳು ಹಾಗೂ ವ್ಯಾನ್ ಚಾಲಕ ಮೃತಪಟ್ಟಿದ್ದಾರೆ.

ತೆಲಂಗಾಣದ ಯಾತ್ರಿಗಳು ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಪಡೆದು, ರಾಮೇಶ್ವರಂಗೆ ಭೇಟಿ ನೀಡಿ ವಾಪಸ್ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಯ್ಯಪ್ಪ ಭಕ್ತರು ಪ್ರಯಾಣಿಸುತ್ತಿದ್ದ ವ್ಯಾನ್‍ಗೆ ಎದುರಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅಪಘಾತದಲ್ಲಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಪುದುಕೋಟ್ಟೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು

ಅಪಘಾತದ ಬಳಿಕ ಲಾರಿ ಚಾಲಕ, ಲಾರಿಯನ್ನು ಸ್ಥಳದಲ್ಲಿ ಬಿಟ್ಟು, ಪರಾರಿಯಾಗಿದ್ದಾನೆ. ಈ ಘಟನೆ ಕುರಿತಂತೆ ತಿರುಮಯಂ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.