
ಪುತ್ತೂರು: ವಿವೇಕಾನಂದ ಪದವಿ ಕಾಲೇಜು, ಶಿವರಾಮ ಕಾರಂತ ಅದ್ಯಯನ ಕೇಂದ್ರ ಮತ್ತು ಕನ್ನಡ ಸಂಘ ಇದರ ಸಹಯೋಗದಲ್ಲಿ 2018 ರ ನಿರಂಜನ ಪ್ರಶಸ್ತಿ ಪ್ರದಾನ ಕಾರ‍್ಯಕ್ರಮ ನಡೆಯಿತು.
ಪುತ್ತೂರಿನ ಖ್ಯಾತ ಸಾಹಿತಿ, ಕಾದಂಬರಿಕಾರಿ, ಕಥೆಗಾರ‍್ತಿ ಎ ಪಿ ಮಾಲತಿಯವರಿಗೆ ಈ ಸಲದ ನಿರಂಜನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಈ ಕಾರ‍್ಯಕ್ರಮದಲ್ಲಿ ಶಿವರಾಮಕಾರಂತ ಅಧ್ಯಯನ ಕೇಂದ್ರದ ಕಾರ‍್ಯಧ್ಯಕ್ಷ ಡಾ. ತಾಳ್ತಜೆ ವಸಂತ ಕುಮಾರ್, ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀನಿವಾಸ ಪೈ, ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಮತ್ತಿತ್ತರರು ಉಪಸ್ಥಿತರಿದ್ದರು.














