
ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ ಸಮಾರಂಭವನ್ನು ಜ.೩೧ಕ್ಕೆ ಸಿದ್ಧಗಂಗಾ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ.
ಜ.21 ರಂದು ಶ್ರೀಗಳು ಲಿಂಗೈಕ್ಯರಾಗಿದ್ದು, ಹನ್ನೊಂದನೇ ದಿನದ ಪೂಜಾ ವಿಧಿವಿಧಾನಗಳ ಬಳಿಕ ಶ್ರೀಗಳ ಪುಣ್ಮಸ್ಮರಣೆ ಸಮಾರಂಭವನ್ನು 31 ರ ಬೆಳಗ್ಗೆ 10.30 ಕ್ಕೆ ಸುತ್ತೂರು ಮಹಾಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ.
ಸಿದ್ಧಗಂಗಾ ವಸ್ತು ಪ್ರದರ್ಶನದ ಮುಂಭಾಗದ ಉದ್ಯಾನವನದಲ್ಲಿ ಶ್ರೀಗಳ ಕಂಚಿನ ಪುತ್ಥಳಿ ಪ್ರತಿಷ್ಠಾಪಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು ತಿಳಿಸಿದರು.
ಸಿರಿಗೆರೆ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆರ್ಟ್ ಆಫ್ ಲಿವಿಂಗ್‌ನ ಶ್ರೀ ರವಿಶಂಕರ ಗುರೂಜಿ ಸಾನ್ನಿಧ್ಯ ವಹಿಸುವರು. ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಇತರರು ಭಾಗವಹಿಸಲಿದ್ದಾರೆ.











