Recent Posts

Sunday, April 26, 2026
ರಾಜಕೀಯಸುದ್ದಿ

ಲೋಕಸಭೆ ಚುನಾವಣೆಗೆ ಸಿದ್ಧತೆ: ಫೆ. 14 ಮತ್ತು 21 ರಂದು ರಾಜ್ಯಕ್ಕೆ ಆಗಮಿಸಲಿರುವ ಅಮಿತ್ ಶಾ – ಕಹಳೆ ನ್ಯೂಸ್

ಬೆಂಗಳೂರು: ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಫೆ. 14 ಮತ್ತು 21 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.

ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿದ ಬೆನ್ನಲ್ಲೇ ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿನ್ನೆಲೆಯಲ್ಲಿ ಫೆ. 14 ರಂದು ಸಿಂಧನೂರಿನಲ್ಲಿ ನಡೆಯುವ ಶಕ್ತಿಕೇಂದ್ರ ಪ್ರಮುಖರ ಸಭೆಯಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ.

ಅದೇ ದಿನ ಸಂಜೆ ಹೊಸಪೇಟೆಯಲ್ಲಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಿದ್ದಾರೆ. ಇನ್ನು ಫೆಬ್ರವರಿ 21 ರಂದು ಚಿಕ್ಕಬಳ್ಳಾಪುರದಲ್ಲಿ ಶಕ್ತಿಕೇಂದ್ರ ಪ್ರಮುಖರ ಜೊತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ.