Recent Posts

Sunday, April 26, 2026
ಸುದ್ದಿ

ಶಾರ್ಟ್ ಸರ್ಕ್ಯೂಟ್: ನವದೆಹಲಿಯ ಹೋಟೆಲ್ ನಲ್ಲಿ ಬೆಂಕಿ ತಗುಲಿ 9 ಮಂದಿ ಸಾವು – ಕಹಳೆ ನ್ಯೂಸ್

ನವದೆಹಲಿ: ನವದೆಹಲಿಯ ಕರೋಲ್ ಭಾಗ್ ಪ್ರದೇಶದಲ್ಲಿರುವ ಹೋಟೆಲ್ ಅರ್ಪಿತಾ ಪ್ಯಾಲೇಸ್ ನಲ್ಲಿ ಬೆಂಕಿ ತಗುಲಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಹೋಟೆಲ್ ನಲ್ಲಿದ್ದ 25 ಕ್ಕೂ ಹೆಚ್ಚು ಮಂದಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ. ಬೆಂಕಿ ಕೆನ್ನಾಲಿಗೆ ಇಡೀ ಕಟ್ಟಡಕ್ಕೆ ಆವರಿಸಿದ್ದು, ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ನಿರಂತರವಾಗಿ ಕಾರ್ಯಾಚರಣೆ ನಡೆಸಿ ಹೋಟೆಲಿನಲ್ಲಿದ್ದ 25 ಮಂದಿಯನ್ನು ರಕ್ಷಿಸಿದ್ದಾರೆ. ಹೋಟೆಲ್ ನಲ್ಲಿ ಇನ್ನೂ ಹಲವರು ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.