Thursday, March 19, 2026
ಸುದ್ದಿ

ಆಪರೇಷನ್ ಕಮಲಕ್ಕೆ ಬ್ರೇಕ್ ಹಾಕಿ, ಲೋಕಸಭೆ ಚುನಾವಣೆಯತ್ತ ಗಮನ ಕೊಡಿ: ಅಮಿತ್ ಶಾ – ಕಹಳೆ ನ್ಯೂಸ್

ಆಪರೇಷನ್ ಕಮಲ ಆಡಿಯೋ ವಿವಾದ ಜೋರಾಗಿದ್ದು, ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಖಡಕ್ ಸಂದೇಶವನ್ನು ರವಾನೆ ಮಾಡಿದೆ.

ಸದ್ಯಕ್ಕೆ ಆಪರೇಷನ್ ಕಮಲಕ್ಕೆ ಬ್ರೇಕ್ ಹಾಕಿ 2019 ರ ಲೋಕಸಭೆ ಚುನಾವಣೆಯತ್ತ ಗಮನ ಕೊಡಲು ಬಿ.ಎಸ್. ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಸೂಚನೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದಲ್ಲಿ ದೋಸ್ತಿ ಸರ್ಕಾರವನ್ನು ಉರುಳಿಸಲು ಆಪರೇಷನ್ ಕಮಲ ನಡೆಸಿದ್ದಾರೆ ಎಂಬ ಆರೋಪ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರು ಆಡಿಯೋ ಬಿಡುಗಡೆ ಮಾಡಿರುವುದು ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಹಿನ್ನೆಡೆಯಾಗುವಂತೆ ಮಾಡಿದೆ.

ಜಾಹೀರಾತು
ಜಾಹೀರಾತು

ಆಡಿಯೋವನ್ನೇ ಬಿಜೆಪಿ ವಿರುದ್ಧ ಅಸ್ತ್ರವಾಗಿ ಪ್ರಯೋಗ ಮಾಡಿದ್ದ ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿ ಕೂಡ ಆಡಿಯೋ ಬಿಡುಗಡೆ ಮಾಡಿ ಬಿಜೆಪಿಯನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿತ್ತು.